ಪಾಕ್ ಕಿತಾಪತಿಗೆ ಸೇನೆಯಿಂದ ತಕ್ಕ ಉತ್ತರ, ದೇಶಕ್ಕಾಗಿ ಕೃಷನ್‌ಲಾಲ್ ಬಲಿದಾನ

Published : Jul 30, 2019, 08:15 PM IST
ಪಾಕ್ ಕಿತಾಪತಿಗೆ ಸೇನೆಯಿಂದ ತಕ್ಕ ಉತ್ತರ, ದೇಶಕ್ಕಾಗಿ ಕೃಷನ್‌ಲಾಲ್ ಬಲಿದಾನ

ಸಾರಾಂಶ

ಆಗಾಗ ಕಾಲು ಕೆದರಿಕೊಂಡು ಒಳನುಗ್ಗುವ ಪಾಕಿಸ್ತಾನ ಮತ್ತೆ ತನ್ನ ಹಳೆಯ ಕಿತಾಪತಿಯನ್ನೇ ಮಾಡಿದೆ.  ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಶ್ರೀನಗರ[ಜು. 30]  ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.  ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ರಾಜೌರಿ ಜಿಲ್ಲೆಯ ಸುಂದರ್​ಬಾನಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಯೋಧ 34 ವರ್ಷದ  ನಾಯಕ್  ಕೃಷನ್ ಲಾಲ್ ಅವರು ಹುತಾತ್ಮರಾಗಿದ್ದಾರೆ.

ತಂಗಧರ್-ಕೇರಾನ್ ಭಾಗದಲ್ಲಿ ಪ್ರತಿ ಏಟು ನೀಡಿರುವ ಭಾರತೀಯ ಸೇನೆ ಇಬ್ಬರು ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ. ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಇಂಥ ಅಪ್ರಚೋದಿತ ದಾಳಿಗಳು ನಿರಂತರವಾಗಿ ನಡೆಯುತ್ತಲೆ ಇವೆ. ನಮ್ಮ ಸೈನ್ಯ ಅದೆಲ್ಲದಕ್ಕೂ ತಕ್ಕ ಉತ್ತರ ನೀಡಿಕೊಂಡೆ ಬಂದಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ