
ಬೆಂಗಳೂರು : ರಾಜ್ಯದ ಗಡಿಭಾಗದಲ್ಲಿರುವ ಕೇರಳದ ಕಾಸರಗೋಡಿನ ಕನ್ನಡ ಪ್ರಾಥಮಿಕ ಶಾಲೆಗಳಿಗೆ ಮಲೆಯಾಳಿ ಶಿಕ್ಷಕರನ್ನು ನೇಮಿಸಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲಾ ಹೇಳಿದ್ದಾರೆ. ಈ ಕುರಿತು ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಸಚಿವರು, ಕಾಸರಗೋಡಿನ ಕನ್ನಡ ಶಾಲೆಗಳಿಗೆ ಮಲೆಯಾಳಿ ಶಿಕ್ಷಕರನ್ನು ನೇಮಿಸಿದ್ದು ಗಂಭೀರ ವಿಚಾರವಾಗಿದೆ.
ಇದರಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ನಿವಾರಿಸಲು ಕೂಡಲೇ ಕ್ರಮ ಕೈಗೊಳ್ಳುವ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚನೆ ನೀಡಬೇಕು. ಕೇರಳ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಹಿತ ಕಾಯುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಅವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.