
ಬೆಂಗಳೂರು[ಜು.1] ಬಜೆಟ್ ಮಂಡನೆ ಮತ್ತು ರಾಜ್ಯದ ರೈತರ ಸಾಲಮನ್ನಾ ವಿಷಯದಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವಿನ ಗೊಂದಲಕ್ಕೆ ತೆರೆಬಿದ್ದಿದೆ. ಇಂದು ನಡೆದ ಸಮನ್ವಯ ಸಮಿತಿಯ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮುಂದುವರಿಸಲು ಸಮಿತಿ ಒಪ್ಪಿಗೆ ನೀಡಿದೆ.
ಸಮ್ಮಿಶ್ರ ಸರ್ಕಾರ ರಚನೆಯ ಬಳಿಕ ಅಸ್ವಿಸ್ತಕ್ಕೆ ಬಂದ ಸಮನ್ವಯ ಸಮಿತಿಯ ಎರಡನೇ ಸಭೆ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ, ಕಾಂಗ್ರೆಸ್- ಜೆಡಿಎಸ್ ನಡುವಿನ ಉದ್ಭವಿಸಿದ್ದ ಅನುಮಾನ, ಗೊಂದಲಕ್ಕೆ ತೆರೆ ಎಳೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತರ ಬೆಳೆ ಸಾಲ ಮನ್ನಾ ಮತ್ತು ಜುಲೈ 5 ರಂದು ಸಿಎಂ ಕುಮಾರಸ್ವಾಮಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವುದಕ್ಕೆ ಒಪ್ಪಿಗೆ ನೀಡಿದೆ.
ನೀರಾವರಿ ಯೋಜನೆಗಳಿಗೆ 1 ಲಕ್ಷ 22 ಕೋಟಿ ರೂ. ಮೀಸಲಿಗೆ ನಿಗದಿ, ಮುಂದಿನ 5 ವರ್ಷದಲ್ಲಿ ರಾಜ್ಯದಲ್ಲಿ 20 ಲಕ್ಷ ಮನೆ ನಿರ್ಮಾಣ, 5 ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಗೆ ಅಗತ್ಯ ಕ್ರಮ, ಕಾಂಗ್ರೆಸ್ ಸರ್ಕಾರದ ಮಹತ್ವಾಂಕ್ಷೆಯ ‘ಆರೋಗ್ಯ ಕರ್ನಾಟಕ’ ಯೋಜನೆ ಅನುಷ್ಠಾನ ಸೇರಿಂತೆ ಹಿಂದಿನ ಸರ್ಕಾರ ಎಲ್ಲ ಯೋಜನೆಗಳ ಮುಂದುವರಿಕೆಗೆ ಸಮಿತಿ ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.