
ಇಟಾನಗರ (ಮಾ. 19): ಮುಂಬರುವ ಅರುಣಾಚಲಪ್ರದೇಶ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಸಂಬಂಧ ಜೆಡಿಎಸ್ ತನ್ನ ಮೊದಲ ಪಟ್ಟಿ ಪ್ರಕಟಿಸಿದೆ.
ಸಾಲಿನಲ್ಲಿ ನಿಲ್ಲಬೇಕಾಗಿಲ್ಲ!: ಗುಜರಾತ್ ನಲ್ಲಿ ಒಬ್ಬ ಮತದಾರನಿಗೆ 1 ಮತಗಟ್ಟೆ!
ಮೊದಲ ಪಟ್ಟಿಯಲ್ಲಿ ವಿಧಾನಸಭೆಯ 11 ಮತ್ತು 2 ಲೋಕಸಭಾ ಕ್ಷೇತ್ರಗಳ ಪೈಕಿ 1 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಪ್ರಕಟಿಸಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಜೆಡಿಎಸ್ ತನ್ನ ಅದೃಷ್ಟಪರೀಕ್ಷೆಗೆ ಇಳಿದಿದೆ.
ಸಿಎಂ ಹುದ್ದೆಯಲ್ಲಿದ್ದಾಗಲೇ ನಿಧನರಾದ 17ನೇ ವ್ಯಕ್ತಿ ಮನೋಹರ್ ಪರ್ರಿಕರ್
ಅರುಣಾಚಲದ ಮಾಜಿ ಸಿಎಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಜೆಡಿಎಸ್ ಉಸ್ತುವಾರಿಯಾಗಿರುವ ಗೆಗಾಂಗ್ ಅಪಾಂಗ್ ಟುಟಿಂಗ್- ಯಿಂಗ್‌ಕಿಯೋಂಗ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ. 60 ಸದಸ್ಯ ಬಲದ ವಿಧಾನಸಭೆ ಮತ್ತು 2 ಲೋಕಸಭಾ ಕ್ಷೇತ್ರಗಳಿಗೆ ಏ.11ರಂದು ಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.