ಪ್ರಮಾಣ ವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ: ಸಚಿವ ಸ್ಥಾನದ ಬಗ್ಗೆ ಏನಂದ್ರು?

By Web DeskFirst Published Nov 15, 2018, 7:50 PM IST
Highlights

ಅನಿತಾ ಕುಮಾರಸ್ವಾಮಿ ಅವರು ಇಂದು (ಗುರುವಾರ) ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಈ ವೇಳೆ  ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, [ನ.15]: ಉಪ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಅಭೂತ ಪೂರ್ವ ಅಂತರಿಂದ ಗೆಲುವು ಸಾಧಿಸಿದ್ದ ಅನಿತಾ ಕುಮಾರಸ್ವಾಮಿ ಅವರು ಇಂದು (ಗುರುವಾರ) ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಮಧ್ಯಾಹ್ನ ಅನಿತಾ ಕುಮಾರಸ್ವಾಮಿಯವರು ಭಗವಂತ ಹಾಗೂ ಸತ್ಯನಿಷ್ಠೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 

ಗೌಡರ ಮನೆಯಲ್ಲಿ ಇರೋರಿಗಿಂತ ವಿಧಾನಸಭೆಯಲ್ಲಿ ಇರೋರೆ ಹೆಚ್ಚು!

ಸಭಾಧ್ಯಕ್ಷ ರಮೇಶ್ ಕುಮಾರ್ ಪ್ರಮಾಣವಚನ ಬೋಧಿಸಿದರು. ಈ ವೇಳೆ, ಸಚಿವ ಡಿ.ಸಿ ತಮ್ಮಣ್ಣ, ಶಾಸಕ ಗೋಪಾಲಯ್ಯ, ಸುರೇಶ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಅನಿತಾ ಕುಮಾರಸ್ವಾಮಿ, ರಾಮನಗರ ಕ್ಷೇತ್ರದ ಜನರು ನನ್ನನ್ನ ಗೆಲ್ಲಿಸಿದ್ದಾರೆ. ನಾನು ರಾಮನಗರದ ಕ್ಷೇತ್ರದ ಮೊದಲ ಮಹಿಳಾ ಶಾಸಕಿ. ನನ್ನ ಪತಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ.

 ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕೆ ಬೇಡಿಕೆ ಇಡೋದಿಲ್ಲಾ. ಅವಕಾಶ ನೀಡಿದರೆ ಸಮರ್ಥವಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

click me!