ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್

By Web DeskFirst Published Oct 13, 2018, 4:48 PM IST
Highlights

ಜಾತ್ಯಾತೀತ ಜನತಾದಳದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಅಶ್ವಿನಿ ಗೌಡ ಅವರನ್ನು ಜೆಡಿಎಸ್ ನಿಂದ ಸ್ಪರ್ಧಿಸಲು ಸೂಚನೆ ನೀಡಿದ್ದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. 

ಬೆಂಗಳೂರು[ಅ.13]: ಉಪಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ವಿನಿ ಗೌಡ ಅವರನ್ನು ಕಣಕ್ಕಿಳಿಸುವುದಾಗಿ  ಪಕ್ಷದ ಮುಖಂಡರು ಪ್ರಕಟಿಸಿದ್ದಾರೆ.

ಜಾತ್ಯಾತೀತ ಜನತಾದಳದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಅಶ್ವಿನಿ ಗೌಡ ಅವರನ್ನು ಜೆಡಿಎಸ್ ನಿಂದ ಸ್ಪರ್ಧಿಸಲು ಸೂಚನೆ ನೀಡಿದ್ದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಸ್ಥಳೀಯ ನಾಯಕರ ಮಧ್ಯೆ ಸಮನ್ವಯತೆ ತರಲು ದೇವೇಗೌಡರು ಯೋಜನೆ ರೂಪಿಸಿದ್ದು ಮಂಡ್ಯ ಜಿಲ್ಲಾ ನಾಯಕರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಈ ಸುದ್ದಿಯನ್ನು ಓದಿ: 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಫೈನಲ್‌

ನಿನ್ನೆಯಿಂದ ನಿರಂತರವಾಗಿ ದೂರವಾಣಿ ಕರೆ ಮಾಡಿರುವ ಜೆಡಿಎಸ್ ವರಿಷ್ಠರು ನಾಮಪತ್ರ ಸಲ್ಲಿಕೆಯ ವೇಳೆ ಮುಖಂಡರು ಹಾಜರಿರುವಂತೆ ಸೂಚನೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ ಅಂತ ಹೇಳಿರುವ ಮಾಜಿ ಪ್ರಧಾನಿಗಳು, ಅಶ್ವಿನಿಗೌಡ ಅವರಿಗೆ ಎಂಪಿ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದೆವು. ಈ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ನಿರ್ಧಾರ ಮಾಡಿದ್ದೇವೆ ಎಂದ ತಿಳಿಸಿದ್ದಾರೆ. ಗೌಡರ ಈ ನಿರ್ಧಾರದಿಂದ ಕೆಲವು ಮುಖಂಡರಿಗೆ ಬೇಸರವಾಗಿದೆ ಎನ್ನಲಾಗಿದೆ. ರಾಮನಗರದಲ್ಲಿ ಈಗಾಗಲೇ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲಾಗಿದೆ.

ಈ ಸುದ್ದಿಯನ್ನು ಓದಿ: ಜೆಡಿಎಸ್ ಅಭ್ಯರ್ಥಿಗೆ ದೇವೇಗೌಡರಿಂದ ಗ್ರೀನ್ ಸಿಗ್ನಲ್

click me!