ಉತ್ತರ ಕರ್ನಾಟಕದತ್ತ ಆಪರೇಶನ್, ಮತ್ತೆ 6 ಶಾಸಕರ ಮುಖ ಬಿಜೆಪಿ ಕಡೆಗೆ?

Published : Jul 29, 2019, 05:32 PM ISTUpdated : Jul 29, 2019, 05:39 PM IST
ಉತ್ತರ ಕರ್ನಾಟಕದತ್ತ ಆಪರೇಶನ್,  ಮತ್ತೆ 6 ಶಾಸಕರ ಮುಖ ಬಿಜೆಪಿ ಕಡೆಗೆ?

ಸಾರಾಂಶ

ಆಪರೇಶನ್ ಸದ್ಯಕ್ಕೆ ಮುಗಿದಿಲ್ಲ ಎಂದು ರಾಜಕಾರನದ ವಲಯ ಹೇಳುತ್ತಿದೆ. ರಾಜೀನಾಮೆ ಕೊಟ್ಟಿದ್ದ ಶಾಸಕರಿಗೆ ಅನರ್ಹ ಪಟ್ಟ ಸಿಕ್ಕಿದೆ. ಆದರೆ ಇನ್ನೂ ಕೆಲವರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಹಾಗಾದರೆ ಏನಿದು ಹೊಸ ಬೆಳವಣಿಗೆ?

ಬೆಂಗಳೂರು [ಜು.29]  ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಮುಂಬೈ ಸೇರಿಕೊಂಡಿದ್ದ 17 ಶಾಸಕರಿಗೆ ವಿಧಾನಸಭೆ ಬಾಗಿಲು ಬಂದ್ ಆಗಿದೆ. ರಾಜೀನಾಮೆ ಕೊಟ್ಟು  ಸ್ಪೀಕರ್ ರಮೇಶ್ ಕುಮಾರ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಆದರೆ ಬಿಜೆಪಿ ಇನ್ನೊಂದು ಮಗ್ಗುಲಿನಲ್ಲಿ ಆಪರೇಶನ್ ಆರಂಭಿಸಿದೆ.

ದೋಸ್ತಿ ಪಕ್ಷಗಳ ಆರು ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಒಬ್ಬ ಶಾಸಕ ಸೇರಿದಂತೆ ಒಟ್ಟು ಆರು ಮಂದಿ ಬಿಜೆಪಿ ಸೇರಲು ಮುಂದಾಗಿದ್ದರು. ಅನರ್ಹತೆ ಭೀತಿಯಿಂದಾಗಿ ಇಷ್ಟು ದಿನ ದೂರ ಉಳಿದಿದ್ದರು ಎನ್ನಲಾಗಿದೆ.  ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಿದ ಬಳಿಕ ರಮೇಶ್ ಕುಮಾರ್ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇವರ ಹಾದಿ ಸುಗಮವಾಗಿದೆ.

ಸಿದ್ದರಾಮಯ್ಯ ಅತ್ಯಾಪ್ತ ಬಿಚ್ಚಿಟ್ಟ ‘ಅತೃಪ್ತಿ’ಯ ಗುಟ್ಟು

ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದೀಗ ಬಿಜೆಪಿಯ ನಾಯಕರೊಬ್ಬರು ಸಭಾಧ್ಯಕ್ಷರಾಗಲಿದ್ದಾರೆ. ಬಿಜೆಪಿ ಬೆಂಬಲಿತ ಸ್ಪೀಕರ್ ಆಯ್ಕೆಯಾದರೆ ರಾಜೀನಾಮೆ ಸಹ ಬೇಗ ಅಂಗೀಕಾರವಾಗಲಿದೆ ಎಂಬ ಚಿಂತನೆಯಲ್ಲಿ ಅತೃಪ್ತರಿದ್ದರು. ಹಾಗಾಗಿ ಇಷ್ಟು ದಿನ ರಾಜೀನಾಮೆಯಿಂದ ದೂರ ಉಳಿದುಕೊಂಡಿದ್ದರು.

ಉತ್ತರ ಕರ್ನಾಟಕಕ್ಕೊಂದು ಡಿಸಿಎಂ ಪೋಸ್ಟ್?

ಯಾವ ಕಾರಣಕ್ಕೆ ಮತ್ತೊಂದು ಆಪರೇಶನ್?  ಅನರ್ಹಗೊಂಡ ಶಾಸಕರ ಪೈಕಿ ಹಳೆ ಮೈಸೂರು ಭಾಗದವರು ಇದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಉಪಚುನಾವಣೆ ನಡೆದರೆ ಇಲ್ಲಿ ಜಯಗಳಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಮತ್ತೆ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನುವುದು ಮೊದಲ ಅಂಶ.

ಒಂದು ವೇಳೆ ರಾಜೀನಾಮೆ ನೀಡಿರುವ ಶಾಸಕರು ಸೋತರೆ ಮತ್ತೆ ಸರ್ಕಾರ ಅಲ್ಪ ಮತಕ್ಕೆ ಕುಸಿಯಬಹುದು. ಈ ರೀತಿ ಆಗದಂತೆ ತಡೆಯಲು ಬಿಜೆಪಿ ಈಗ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದೆ. ಅತೃಪ್ತ ಶಾಸಕರ ಜೊತೆ ಸ್ನೇಹಿತರಾಗಿರುವ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು ತಂತ್ರಗಳ ಪ್ರಯೋಗ ಮಾಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ