
ಹುಬ್ಬಳ್ಳಿ[ಅ.15] ಉಪ ಚುನಾವಣೆಯ ಎಲ್ಲ ಕ್ಷೇತ್ರದಲ್ಲಿ ಗೆಲುವು ನಮ್ಮದೇ. ಸಮ್ಮಿಶ್ರ ಸರ್ಕಾರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯಲ್ಲಿ ಕೆಲ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ. ಯಡಿಯೂರಪ್ಪ ಮೊದಲ ತಮ್ಮ ಪಕ್ಷವು ಭಿನ್ನಮತ ಶಮನ ಮಾಡಿಕೊಳ್ಳಲಿ. ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಭಿನ್ನಮತವ ಇಲ್ಲ. ಸಮ್ಮಿಶ್ರ ಸರ್ಕಾರದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಬಿನ್ನಮತ ಇರುವುದು ಬಿಜೆಪಿಯಲ್ಲಿ ಎಂದು ತಿರುಗೇಟು ನೀಡಿದ್ದಾರೆ.
ಈ ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸುವುದು ನಮ್ಮ ಗುರಿ. ಉಪ ಚುನಾವಣಾ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗದು ಎಂದು ಮಾಜಿ ಸಿಎಂ ಅಭಯ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.