
ಶಿರಾ: ಹಳೇ ಮೈಸೂರು ಭಾಗದಲ್ಲಿ ಭರ್ಜರಿಯಾಗಿ ಚುನಾವಣೆ ಪ್ರಚಾರ ನಡೆಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬುಧವಾರದಂದು ಶಿರಾದಲ್ಲೂ ಪಕ್ಷದ ಶಕ್ತಿಪ್ರದರ್ಶನ ನಡೆಸಿದರು.
ಪಟ್ಟಣದಲ್ಲಿ ನಡೆದ ಜೆಡಿಎಸ್ ವಿಕಾಸ ಪರ್ವ ಉದ್ಘಾಟಿಸಿ ಮಾತನಾಡಿದ ಅವರು, ನಿರುದ್ಯೋಗಿ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳಿಗೆ ಸಸಿ ನೆಟ್ಟು ಬೆಳೆಸುವ ಕೆಲಸ ನೀಡಿ ಪ್ರತಿ ತಿಂಗಳು .5000 ಸಂಬಳ ನೀಡಲಾಗುವುದು ಎಂದು ಹೊಸ ಭರವಸೆ ನೀಡಿದರು.
ಇದಕ್ಕೂ ಮೊದಲು ಶಿರಾ ಪಟ್ಟಣಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಅವರು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸುಮಾರು 2 ಗಂಟೆಗೂ ಅಧಿಕ ಕಾಲ ರೋಡ್ ಶೋ ನಡೆಸಿದರು. ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅವರನ್ನು ಸ್ವಾಗತಿಸಿದ ಜೆಡಿಎಸ್ ಕಾರ್ಯಕರ್ತರು ರಸ್ತೆಪಕ್ಕದಲ್ಲಿ ಬುಲ್ಡೋಜರ್‌ಗಳನ್ನು ಸಾಲು ನಿಲ್ಲಿಸಿ ಹೂವಿನ ಮಳೆ ಹರಿಸಿದರು. ಮುಸ್ಲಿಮ್ ಸಮುದಾಯದ ಮುಖಂಡರು ಕುಮಾರಸ್ವಾಮಿಗೆ ಬೃಹತ್ ಹೂವಿನ ಹಾರ ಸಮರ್ಪಣೆ ಮಾಡಿದರು. ಹಾಲು ಮತಸ್ಥ ಸಮುದಾಯದ ಮುಖಂಡರು ಕಂಬಳಿ ಹೊದಿಸಿ ಕುರಿಮರಿ ಮತ್ತು ಬೆಳ್ಳಿಖಡ್ಗವನ್ನು ಕಾಣಿಕೆಯಾಗಿ ನೀಡಿದರು.
ಮೂಡಲಗಿರಿಯಪ್ಪ ಜೆಡಿಎಸ್‌ಗೆ: ಕಾಂಗ್ರೆಸ್‌ನಿಂದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಸೇರಿದಂತೆ ನೂರಾರು ಮಂದಿ ಜೆಡಿಎಸ್‌ಗೆ ಸೇರ್ಪಡೆಯಾದರು. ಸಮಾವೇಶದಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.