ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರಿಗೆ ಪೀಕಲಾಟ ತಂಡ ಗೌಡರ ನಿರ್ಧಾರ

Published : Mar 11, 2018, 08:05 AM ISTUpdated : Apr 11, 2018, 12:43 PM IST
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರಿಗೆ ಪೀಕಲಾಟ ತಂಡ ಗೌಡರ ನಿರ್ಧಾರ

ಸಾರಾಂಶ

ನಮ್ಮ ಅಭ್ಯರ್ಥಿ ಗೆಲ್ಲಲು ಅಗತ್ಯವಾದ ಮತಗಳ ಕೊರತೆಯಿದ್ದು, ಪಕ್ಷೇತರ ಶಾಸಕರ ಬೆಂಬಲವನ್ನೂ ಕೋರಲಾಗುವುದು. ಕಳೆದ ಬಾರಿಯಂತೆ ಆಗದೆ ಪಕ್ಷೇತರರು ನಮಗೆ ಸಹಕಾರ ನೀಡಲಿದ್ದಾರೆ ಎಂಬ ವಿಶ್ವಾಸವಿದೆ.

ಬೆಂಗಳೂರು(ಮಾ.11): ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದಿಂದ ಜಾರಿಗೊಳಿಸುವ ವಿಪ್ ಬಂಡಾಯ ಶಾಸಕರಿಗೂ ಅನ್ವಯವಾಗಲಿದೆ. ಅವರೂ ಅದನ್ನು ಪಾಲಿಸಬೇಕಾಗಿರುವುದರಿಂದ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಹಾಕಿದ್ದೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ ಹೇಳಿದ್ದಾರೆ.

ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷದಿಂದ ಬಿ.ಎಂ.ಫಾರೂಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲಲು ಅಗತ್ಯವಾದ ಮತಗಳ ಕೊರತೆಯಿದ್ದು, ಪಕ್ಷೇತರ ಶಾಸಕರ ಬೆಂಬಲವನ್ನೂ ಕೋರಲಾಗುವುದು. ಕಳೆದ ಬಾರಿಯಂತೆ ಆಗದೆ ಪಕ್ಷೇತರರು ನಮಗೆ ಸಹಕಾರ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ಜತೆಗೆ ಏಳು ಮಂದಿ ಬಂಡಾಯ ಶಾಸಕರಿಗೂ ಸಹ ವಿಪ್ ಅನ್ವಯವಾಗಲಿದೆ. ಅವರನ್ನು ಪಕ್ಷದಿಂದ ಈವರೆಗೆ ಉಚ್ಚಾಟನೆ ಮಾಡಿಲ್ಲ. ಜತೆಗೆ ಅವರು ಸಹ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಹೀಗಾಗಿ ಈಗಲೂ ಸಹ ಅವರು ಜಾತ್ಯತೀತ ಜನತಾದಳದ ಸದಸ್ಯರಾಗಿಯೇ ಇದ್ದಾರೆ. ಅವರನ್ನು ವಿಪ್ ವ್ಯಾಪ್ತಿಗೆ ತಂದು ನೋಟಿಸ್ ನೀಡಲಾಗುವುದು. ಸ್ಪೀಕರ್ ಅವರು ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!