
ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮುಂದುವರಿದಿದ್ದು ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ವಿಜಯಲಕ್ಷ್ಮಿ ಜಾತ್ಯಾತೀತ ಜನತಾದಳಕ್ಕೆ ಒಲಿಯುವ ಸಾಧ್ಯತೆ ಹೆಚ್ಚಾಗಿದೆ.
ಮೊದಲ ಪ್ರಾಶಸ್ತ್ಯದ ಮತ ಎಣಿಕೆ ಬಳಿಕ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು 5247 ಮತಗಳು, ಬಿಜೆಪಿ ಅಭ್ಯರ್ಥಿ ಬಸವರಾಜು 4947 ಮತಗಳು, ಕಾಂಗ್ರೆಸ್ ಅಭ್ಯರ್ಥಿ ನಿರಂಜನ್ ಅವರಿಗೆ 496 ಮತಗಳು ಲಭಿಸಿವೆ. ತಿರಸ್ಕೃತ ಮತಗಳು 1237, ಜೆಡಿಎಸ್ ಬಂಡಾಯ ಅಭ್ಯರ್ಥಿ ಹೆಚ್. ಎಸ್. ಅರವಿಂದ್ ಅವರಿಗೆ 746 ಮತಗಳು ಬಂದಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಠೇವಣಿ ನಷ್ಟವಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿದ್ದ ವೈ.ಎ. ನಾರಾಯಣ ಸ್ವಾಮಿ ಅವರ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ನಾರಾಯಣ ಸ್ವಾಮಿ ಅವರು ಹೆಬ್ಬಾಳ ಕ್ಷೇತ್ರ ಉಪ ಚುನಾವಣೆಯಲ್ಲಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.