ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ಭರವಸೆ ಕಮಿಟಿ ಅಧ್ಯಕ್ಷ ರಾಜೀನಾಮೆ?

By Web DeskFirst Published Jun 15, 2019, 8:44 AM IST
Highlights

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ವರ್ಷ ಮುಗಿಸುತ್ತಿದ್ದಂತೆ, ಬಂಡಾಯದ ಬೇಗುದಿಯೂ ಹೆಚ್ಚಾಗಿದೆ. ಈ ಪರಿಸ್ಥಿತಿಯಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯೂ ಆಗಿದೆ. ಶಾಸಕರಲ್ಲಿ ಅಸಮಾಧಾನ ಹೆಚ್ಚುತ್ತಲೇ ಇದೆ. ಎಲ್ಲವಕ್ಕೂ ಇಂಬು ಕೊಡುವಂತೆ ಸರಕಾರದ ಮೇಲೆ ಭರವಸೆ ಕಳೆದು ಕೊಂಡು ಭರವಸೆ ಕಮಿಟಿ ಅದ್ಯಕ್ಷರೂ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು (ಜೂ.15) :  ರಾಜ್ಯ ಸಮ್ಮಿಶ್ರ ಸರ್ಕಾರದ ನಡೆಯ ಬಗ್ಗೆ ಆಡಳಿತ ಪಕ್ಷದಲ್ಲಿಯೇ ಅಸಮಾಧಾನಗಳು ಹೆಚ್ಚಾಗುತ್ತಿದ್ದು, ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ ಶಾಸಕ ಎ.ಟಿ.ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ, ಎನ್ನಲಾಗುತ್ತಿದೆ. ಸರ್ಕಾರವು ನೀಡಿದ ವಿವಿಧ ಭರವಸೆಗಳನ್ನು ಈಡೇರಿಸುವಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದಿರುವುದಕ್ಕೆ ಬೇಸರಗೊಂಡು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಈ ವರದಿಯನ್ನು ರಾಮಸ್ವಾಮಿಯವರು ತಳ್ಳಿ ಹಾಕಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಸರ್ಕಾರಿ ಭರವಸೆಗಳ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿಯೂ ಹಲವು ಭರವಸೆಗಳನ್ನು ಈಡೇರಿಸದಿರುವ ಬಗ್ಗೆ ಚರ್ಚೆ ನಡೆಯಿತು. ನೀಡಿರುವ ಅಶ್ವಾಸನೆಗಳನ್ನು ಈಡೇರಿಸದ ಕಾರಣ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಯಾವುದೇ ಪ್ರಯೋಜನ ಇಲ್ಲ ಎಂದು ಅಭಿಪ್ರಾಯಪಟ್ಟು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಕೆರೆ ಸಂರಕ್ಷಣೆ ಮತ್ತು ಒತ್ತುವರಿ ವಿಚಾರದಲ್ಲಿ ಸಾಕಷ್ಟು ಹೋರಾಟಗಳನ್ನು ನಡೆಸಿರುವ ಎ.ಟಿ.ರಾಮಸ್ವಾಮಿ ಅವರು JDS ಅಭ್ಯರ್ಥಿಯಾಗಿ ಅರಕಲಗೂಡು ಕ್ಷೇತ್ರದಿಂದ ಜಯಗಳಿಸಿ ಶಾಸಕರಾಗಿದ್ದಾರೆ.

ಇದೊಂದು ವಿಶೇಷ ಸುದ್ದಿ ಎಂದು ರಾಜಾಜಿ ನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸರ್ಕಾರದ ಭರವಸೆ ಸಮಿತಿಯ ಅಧ್ಯಕ್ಷ ಎ.ಟಿ.ರಾಮಸ್ವಾಮಿಯವರು ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ಸರ್ಕಾರದ ಭರವಸೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

— Nimma Sureshkumar (@nimmasuresh)
click me!