
ಬೆಂಗಳೂರು(ನ.11): ಜೆಡಿಎಸ್ ಮುಖಂಡ ಹಾಗೂ ಕಳೆದ ಬಾರಿ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅತ್ಯಲ್ಪ ಮತಗಳ ಅಂತರದಿಂದ ಸೋಲುಂಡಿದ್ದ ಅ.ದೇವೇಗೌಡ ಬಿಜೆಪಿಗೆ ಸೇರ್ಪಡೆಗೊಳ್ಳುವುದು ಬಹುತೇಕ ನಿಚ್ಚಳವಾಗಿದೆ.
ಶುಕ್ರವಾರ ಬೆಳಗ್ಗೆ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಿರ್ಧಾರ ಕೈಗೊಂಡರು ಎಂದು ತಿಳಿದು ಬಂದಿದೆ. ವಾಸ್ತವವಾಗಿ ದೇವೇಗೌಡ ಅವರು ಬರುವ ಜೂನ್‌ನಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯಾಗಬೇಕಿತ್ತು. ಅದಕ್ಕಾಗಿ ಸಿದ್ಧತೆಯನ್ನೂ ನಡೆಸಿದ್ದರು. ಆದರೆ, ಮಾಜಿ ಶಾಸಕ ಎಲ್.ಆರ್. ಶಿವರಾಮೇಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ನಂತರ ಅವರನ್ನೇ ಕಣಕ್ಕಿಳಿಸಲು ಜೆಡಿಎಸ್ ನಾಯಕರು ತೀರ್ಮಾನಿಸಿದರು. ಹೀಗಾಗಿ, ಎ.ದೇವೇಗೌಡರು ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.