ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಮುಖಂಡ ವಿಶ್ವನಾಥ್ ಅಸಮಾಧಾನ

Published : Jul 11, 2018, 09:10 AM IST
ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಮುಖಂಡ ವಿಶ್ವನಾಥ್ ಅಸಮಾಧಾನ

ಸಾರಾಂಶ

ಜೆಡಿಎಸ್ ಮುಖಂಡ ಎಚ್ ವಿಶ್ವನಾಥ್ ಸರ್ಕಾರ ಈ ನಿರ್ಧಾರಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ  ತೈಲ ದರ ಏರಿಕೆ ಬಗ್ಗೆ ಮಾತನಾಡಿ ಇದರಿಂದ ಸಾಮಾನ್ಯ ಜನತೆ ಮೇಲೆ ಪರಿಣಾಮ ಉಂಟಾಗಲಿದೆ ಎಂದರು. 

ಬೆಂಗಳೂರು :  ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಏರಿಕೆ ಮಾಡುವ ನಿರ್ಧಾರವನ್ನು ವಾಪಸ್ ಪಡೆಯುವಂತೆ ಆಡಳಿತಾರೂಢ  ಜೆಡಿಎಸ್‌ನ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಜೆಟ್‌ನಲ್ಲಿ ಸಿಹಿ ಮತ್ತು ಕಹಿ ಎರಡೂ ಇದೆ ಎಂದು ಮಾರ್ಮಿಕವಾಗಿ ಹೇಳಿದರು.

ಮುಖ್ಯಮಂತ್ರಿಗಳು ತಮ್ಮ ಬಜೆಟ್‌ನಲ್ಲಿ ತೈಲದ ಮೇಲಿನ ಕರಭಾರ ಹೆಚ್ಚಿಸುವ ತೀರ್ಮಾನ ಪ್ರಕಟಿಸಿದ್ದಾರೆ. ಆದರೆ, ಇದರಿಂದ ಶ್ರೀಸಾಮಾನ್ಯನ ಜನಜೀವನ ದುಸ್ತರವಾಗಲಿದೆ. ಆತನ ಮೇಲಿನ ಈ ಭಾರ ಕಡಮೆಗೊಳಿಸಬೇಕು. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ಸಿಎಂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಕುಮಾರಸ್ವಾಮಿ ಚೊಚ್ಚಲ ಬಜೆಟ್‌ನಲ್ಲಿ ಹಲ ವಾರು ಉತ್ತಮ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಮೆಟ್ರೋ ರೈಲು ವಿಸ್ತರಣೆ, 6 ಎಲಿವೇ ಟೆಡ್ ರಸ್ತೆಗಳ ನಿರ್ಮಾಣ, ಬಡಮಕ್ಕಳಿಗೆ ಅನುಕೂಲವಾಗಲಿರುವ ಬೋನ್‌ಮ್ಯಾರೋ ಟ್ರಾನ್ಸ್‌ಪ್ಲಾಂಟೇಷನ್‌ಗೆ ಅನುದಾನ ಒದಗಿಸಿರುವುದು ಉತ್ತಮವಾದದ್ದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್