
ಬೆಂಗಳೂರು (ಮಾ.25): ಜೆಡಿಎಸ್ ಪಕ್ಷವನ್ನು ಸಂಘ ಪರಿವಾರ ಎಂದಿದ್ದಕ್ಕೆ ರಾಹುಲ್ ಗಾಂಧಿ ಮೇಲೆ ದೇವೇಗೌಡ ಗರಂ ಆಗಿದ್ದಾರೆ.
ಚೀಟಿಯಲ್ಲಿ ಬರೆದು ಕೊಟ್ಟು ರಾಹುಲ್ ಗಾಂಧಿ ಮೂಲಕ ಕಾಂಗ್ರೆಸ್ ಈ ರೀತಿ ಹೇಳಿಕೆ ನೀಡಿದೆ. ರಾಹುಲ್ ಗಾಂಧಿಯದ್ದು ಅತಿರೇಕದ ವರ್ತನೆ. ದೇಶದಲ್ಲಿ ಎಲ್ಲಿದೆ ಕಾಂಗ್ರೆಸ್ ಪಕ್ಷದ ಶಕ್ತಿ? ಜಾತ್ಯತೀತತೆ ಬಗ್ಗೆ ಪ್ರಶ್ನಿಸುವ ಯೋಗ್ಯತೆ ನಿಮಗಿದೆಯಾ ಎಂದು ರಾಹುಲ್ ಗಾಂಧಿ ವಿರುದ್ಧ ಎಚ್.ಡಿ.ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಕೂಡಾ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಸಿಎಂ ಆಗುತ್ತಾರೆಂದು ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಡಿಸಿಎಂ ಹುದ್ದೆ ಕೊಡಿಸಿದ್ದು ಜೆಡಿಎಸ್ ಪಕ್ಷ. ಈಗ ರಾಹುಲ್ ಗಾಂಧಿ ಕೈಗೆ ಚೀಟಿ ಕೊಟ್ಟು ಟೀಕೆ ಮಾಡಿಸುತ್ತಾರೆ ಎಂದು ಸಿದ್ದರಾಮಯ್ಯ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಅವನತಿಗೆ ಸಾಕ್ಷಿಯಾಗಲಿದೆ ಕರ್ನಾಟಕ ರಾಜ್ಯ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.