ತೆನೆ ಬಿಟ್ಟು ‘ಕೈ’ ಸೇರಿದ ಕೆ.ವಿ.ನಾಗರಾಜ್ ; ಕೈಗೆ ಬಂದಿದೆ ಇನ್ನಷ್ಟು ಬಲ

Published : Mar 28, 2018, 08:50 AM ISTUpdated : Apr 11, 2018, 12:45 PM IST
ತೆನೆ ಬಿಟ್ಟು ‘ಕೈ’ ಸೇರಿದ ಕೆ.ವಿ.ನಾಗರಾಜ್ ; ಕೈಗೆ ಬಂದಿದೆ ಇನ್ನಷ್ಟು ಬಲ

ಸಾರಾಂಶ

ಬಯಲು ಸೀಮೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರು, ಪ್ರಭಾವಿ ಮುಖಂಡರನ್ನ ಕಾಂಗ್ರೆಸ್​​ಗೆ ಸೆಳೆಯುವಲ್ಲಿ ಯಶಸ್ವಿಯಾಗ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸಂಘಟನೆಗೆ ಪೂರಕವಾಗಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗ್ತಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷರನ್ನೇ  ಕಾಂಗ್ರೆಸ್’ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಬೆಂಗಳೂರು (ಮಾ.28): ಬಯಲು ಸೀಮೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರು, ಪ್ರಭಾವಿ ಮುಖಂಡರನ್ನ ಕಾಂಗ್ರೆಸ್​​ಗೆ ಸೆಳೆಯುವಲ್ಲಿ ಯಶಸ್ವಿಯಾಗ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸಂಘಟನೆಗೆ ಪೂರಕವಾಗಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗ್ತಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷರನ್ನೇ  ಕಾಂಗ್ರೆಸ್’ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ನಾಗರಾಜ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೈನುಗಾರಿಕೆ ಕ್ಷೇತ್ರ ಮತ್ತು ಕ್ಷೀರೋದ್ಯಮದಲ್ಲಿ ಪ್ರಭಾವಿಯಾಗಿರುವ ಕೆ.ವಿ.ನಾಗರಾಜ್, ಜೆಡಿಎಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದ ಕಾರಣಕ್ಕೆ ಕಾಂಗ್ರೆಸ್ ಸೇರ್ಪಡೆಯಾಗ್ತಿರೋದಾಗಿ ತಿಳಿಸಿದ್ದಾರೆ. 

ಕೆ.ವಿ.ನಾಗರಾಜ್ ಸೇರ್ಪಡೆಯಿಂದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಲ ಬಂದಂತಾಗಿದೆ. ಹಾಲಿ ಶಾಸಕರಾಗಿರುವ ಡಾ.ಕೆ.ಸುಧಾಕರ್ ಅವರಿಗೆ ಸಾಥ್ ನೀಡಲು ನಾಗರಾಜ್  ತೀರ್ಮಾನ ಮಾಡಿದ್ದಾರೆ. ಜೆಡಿಎಸ್ ಸಂಘಟನೆಯಲ್ಲಿ ಪ್ರಭಾವಿಯಾಗಿರುವ ನಾಗರಾಜ್ ಅವರ ಕಾಂಗ್ರೆಸ್ ಸೇರ್ಪಡೆ, ಇಡೀ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಸೃಷ್ಟಿಸಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ಕೆ.ವಿ.ನಾಗರಾಜ್ ಅವರ ಸೇರ್ಪಡೆಯಿಂದ ಜೆಡಿಎಸ್ ಗೆ ದೊಡ್ಡ ಹೊಡೆತ ಕೊಟ್ಟಂತಾಗಿದೆ. ಕಳೆದ ಬಾರಿ ಟಿಕೇಟ್ ವಂಚಿತರಾಗಿದ್ದ ನಾಗರಾಜ್ ಅವರಿಗೆ ಸೂಕ್ತ ಸ್ಥಾನಮಾನ ಕೊಡದ ಕಾರಣಕ್ಕೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದಾಗ, ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ ಕೆ.ವಿ.ನಾಗರಾಜ್ ಈಗ ಕಾಂಗ್ರೆಸ್ ಪಾಲಾಗಿದ್ದಾರೆ. ಇದು ಸಹಜವಾಗಿಯೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಉತ್ತಮ ಬೆಳವಣಿಗೆ ಎನ್ನಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ
ಹೂವಿನಹಡಗಲಿ: ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ?