ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

Published : Nov 01, 2017, 08:19 AM ISTUpdated : Apr 11, 2018, 12:42 PM IST
ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

ಸಾರಾಂಶ

ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಾದು ಅವರ, ಒಂದು ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕ್ಕಮಾದು ಹಿರಿಯ ಪತ್ನಿ ಜಯಮ್ಮ ಮತ್ತು ಕಿರಿಯ ಪತ್ನಿ ನಾಗಮ್ಮ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಹೆಚ್.ಡಿ. ಕೋಟೆ(ನ.01): ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಜಿಲ್ಲೆಯ ಎಚ್.​ಡಿ ಕೋಟೆ ಶಾಸಕ ಚಿಕ್ಕಮಾದು ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಾದು ಅವರ, ಒಂದು ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕ್ಕಮಾದು ಹಿರಿಯ ಪತ್ನಿ ಜಯಮ್ಮ ಮತ್ತು ಕಿರಿಯ ಪತ್ನಿ ನಾಗಮ್ಮ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಕೆ.ಆರ್ ನಗರ ತಾಲೂಕು ಕಲ್ಲಹಳ್ಳಿ ಗ್ರಾಮದ ಚಿಕ್ಕಮಾದು, ಹುಣಸೂರು ತಾಲೂಕಿನ ಹೊಸ ರಾಮೇನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳ ಕಾಲ ವಾಸವಿದ್ದು, ನಂತರ ಬಳಿಕ ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಪ್ರಸ್ತುತ ವಾಸಿಸತೊಡಗಿದರು. 1978 ರಲ್ಲಿ ರಾಜಕೀಯಕ್ಕೆ ಧುಮುಕಿದ ಚಿಕ್ಕಮಾದು, ದೇವರಾಜು ಅರಸು ನೇತೃತ್ವದಲ್ಲಿ ಬಿಳಿಕೆರೆ ಕ್ಷೇತ್ರದ ಜಿ.ಪಂ. ಸದಸ್ಯರಾದರು, ತದನಂತರ 1991 ರಲ್ಲಿ ಕಾಂಗ್ರೆಸ್‌'ನಿಂದ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ತದನಂತರ ರಾಜಕೀಯ ಬದಲಾವಣೆಯಾಗಿ ಜಿಟಿಡಿ ನೇತೃತ್ವದಲ್ಲಿ 2007-08 ರಲ್ಲಿ ಜೆಡಿಎಸ್ ಎಂಎಲ್‌'ಸಿಯಾಗಿ, ಆ ಬಳಿಕ 2013 ರಲ್ಲಿ ಹೆಚ್ ಡಿ ಕೋಟೆ ಕ್ಷೇತ್ರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾಗಿದ್ದರು.

ಶಾಸಕ ಚಿಕ್ಕಮಾದು ಅನಾರೋಗ್ಯದ ಹಿನ್ನೆಲೆಯಲ್ಲಿ ನ. 3 ರಂದು ಮೈಸೂರಿನಲ್ಲಿ ನಡೆಯಬೇಕಿದ್ದ ಜೆಡಿಎಸ್ ಸಮಾವೇಶವನ್ನ ರದ್ದು ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ ನಿನ್ನೆ ತಡರಾತ್ರಿಯೇ ಚಿಕ್ಕಮಾದು ನಿಧನರಾಗಿದ್ದು, ಜೆಡಿಎಸ್‌ ಪಕ್ಷಕ್ಕೆ ತುಂಬಲಾಗದ ನಷ್ಟವಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯರಿಂದ ರಾಜ್ಯದ ದಲಿತರ ಸರ್ವನಾಶ: ಮಾಜಿ ಸಂಸದ ಪ್ರತಾಪ್ ಸಿಂಹ
Karnataka News Live:4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲಲ್ಲಿ ಎಲೆಕ್ಷನ್