
ಬೆಂಗಳೂರು: ಕೇವಲ 37 ಶಾಸಕರನ್ನು ಹೊಂದಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ನೊಂದಿಗೆ ಸರಕಾರ ರಚಿಸುತ್ತಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಉಭಯ ಪಾಳಯದಲ್ಲಿಯೂ ಸಂಪುಟ ಸಂಟಕ ಆರಂಭವಾಗಿದೆ. ಖುದ್ದು ಜೆಡಿಎಸ್ ಶಾಸಕರಲ್ಲಿಯೂ ಅಸಮಾಧಾನ ಸ್ಫೋಟಗೊಂಡಿದೆ.
ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ನಲ್ಲಿ ಜೆಡಿಎಸ್ ಶಾಸಕರು ತಂಗಿದ್ದಾರೆ. ಆದರೆ, ಇವರನ್ನು ನಾಯಕರು ಕರೆದೊಯ್ಯಲು ಬಾರದ ಹಿನ್ನೆಲೆಯಲ್ಲಿ ಮುನಿಸು ವ್ಯಕ್ತಪಡಿಸಿದ್ದಾರೆ. ಅಲ್ಲಿಗೆ ಕಳುಹಿಸಿದ ಬಸ್ ಹತ್ತಲು ಹಿಂದೇಟು ಹಾಕಿದ ಕೆಲವು ಶಾಸಕರು ತಮ್ಮ ಕಾರಿನಲ್ಲಿಯೇ ವಿಧಾನಸೌಧದತ್ತ ಪ್ರಯಾಣ ಬೆಳೆಸಿದ್ದಾರೆ.
ವಿಧಾನಸೌಧದ ಮುಂದೆ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಸರಕಾರ ರಚನೆಯಾಗುವ ಮುನ್ನವೇ ವಿವಿಧ ಸಚಿವ ಸ್ಥಾನಗಳಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಖುದ್ದು ಜೆಡಿಎಸ್ ಶಾಸಕರ ಮುನಿಸುಕೊಂಡರೆ, ಕುಮಾರಸ್ವಾಮಿ ಅವರಿಗೆ ಈ ಸಮಸ್ಯೆ ಬಗೆ ಹರಿಸುವುದೇ ದೊಡ್ಡ ಸವಾಲಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.