
ಬೆಂಗಳೂರು[ಜೂ.09]: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್'ನ ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದ ಕೆಲವು ದಿನಗಳ ಹಿಂದೆ ನಗರದ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ರಾಮನಗರದ ದೊಡ್ಡಮಸೀದಿಯ ನಿವಸಿಯಾಗಿದ್ದ ಅವರು ಈ ಹಿಂದೆ ನಗರಸಭಾ ಸದಸ್ಯರಾಗಿದ್ದರು. 2012ರಲ್ಲಿ ಜೆಡಿಎಸ್'ನಿಂದ ವಿದಾನ ಪರಿಷತ್ ಸದಸ್ಯರಾಗಿದ್ದರು.
ಇದೇ ತಿಂಗಳ ಅಂತ್ಯಕ್ಕೆ ಅವರ ಸದಸ್ಯತ್ವ ಅವಧಿ ಮುಕ್ತಾಯವಾಗುತ್ತಿತ್ತು. ಮಧ್ಯಾಹ್ನ 3 ಗಂಟೆಗೆ ರಾಮನಗರದಲ್ಲಿ ಮೃತರ ಅಂತಿಮ ಸಂಸ್ಕಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಹಲವು ರಾಜಕೀಯ ನಾಯಕರು ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.