7 ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್' ಸೇರ್ಪಡೆಗೆ ರಾಹುಲ್ ಸಮ್ಮತಿ: ಸಿಎಂ

Published : Aug 16, 2017, 10:23 PM ISTUpdated : Apr 11, 2018, 12:57 PM IST
7 ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್' ಸೇರ್ಪಡೆಗೆ ರಾಹುಲ್ ಸಮ್ಮತಿ: ಸಿಎಂ

ಸಾರಾಂಶ

ಅಮಾನತುಗೊಂಡಿರುವ ಇವರನ್ನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಾಹುಲ್ ಗಾಂಧಿ ತೆಗೆದುಕೊಂಡಿದ್ದಾರೆ. ಈ

ನವದೆಹಲಿ(ಆ.16): ಜೆಡಿಎಸ್'ನಿಂದ ಅಮಾನತು'ಗೊಂಡಿರುವ 7 ಬಂಡಾಯ ಶಾಸಕರನ್ನು  ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಶಾಸಕರನ್ನು ಜೆಡಿಎಸ್'ನಿಂದ ಹೊರಹಾಕಲಾಗಿದೆ. ಅಮಾನತುಗೊಂಡಿರುವ ಇವರನ್ನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಾಹುಲ್ ಗಾಂಧಿ ತೆಗೆದುಕೊಂಡಿದ್ದಾರೆ. ಈ ವರ್ಷದ ಡಿಸೆಂಬರ್ ಅಥವಾ ಮುಂದಿನ ಜನವರಿಯಲ್ಲಿ ಸೇರ್ಪಡೆಗೊಳ್ಳಲಿದ್ದಾರೆ. ಇವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಲಿಷ್ಠರಾಗಿರುವುದರಿಂದ ಇವರ ಆಗಮನ ಕಾಂಗ್ರೆಸ್'ಗೆ ಲಾಭವಾಗಲಿದೆ. ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿದ್ದಾರೆ. ನೀವು ಕೋಮುವಾದಿ ಪಕ್ಷದಲ್ಲಿದ್ದವರು ನಿಮ್ಮನ್ನು ಸೇರಿಸಿಕೊಳ್ಳುವ ಬಗ್ಗೆ ಆಮೇಲೆ ನೋಡೋಣ ಎಂದಿದ್ದೇನೆ' ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಡಿಸಿ ಟಾರ್ಗೆಟ್; ಎಂಇಎಸ್ ಪರ ನಿಂತು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ ಮಹಾರಾಷ್ಟ್ರದ ಸಂಸದ ಮಾನೆ!
ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!