
ಬೆಂಗಳೂರು: ಕಳೆದ ವರ್ಷದಂತೆ ಈ ಬಾರಿಯೂ ಬಿಬಿಎಂಪಿ ಮೇಯರ್ ಪಟ್ಟ ತಮಗೇ ನೀಡ ಬೇಕು ಎಂಬ ವರಸೆಯನ್ನು ಜೆಡಿಎಸ್ ಆರಂಭಿಸಿದ್ದು ಈ ನಿಲುವಿಗೆ ಕೊನೆಯವರೆಗೂ ಗಟ್ಟಿಯಾಗಿ ಅಂಟಿಕೊಳ್ಳುತ್ತ ದೆಯೇ ಎಂಬುದನ್ನು ಕಾದು ನೋಡಬೇಕು.
ಭಾನುವಾರ ಜೆಡಿಎಸ್’ನ ಬಿಬಿಎಂಪಿಯ ಸದಸ್ಯರು ರಾಜ್ಯಾಧ್ಯಕ್ಷ ಎಚ್..ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಸುದೀರ್ಘ ಮಾತುಕತೆ ನಡೆಸಿ ಮಿತ್ರಪಕ್ಷ ಕಾಂಗ್ರೆಸ್ ಬಗ್ಗೆ ಆಕ್ಷೇಪ, ಅಸಮಾಧಾನವನ್ನು ಹೊರಹಾಕಿದರು. ಸಭೆಯ ನಂತರ ಸುದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈ ಬಾರಿ ಮೇಯರ್ ಸ್ಥಾನವನ್ನು ನಮ್ಮ ಪಕ್ಷ ದ ಅಭ್ಯರ್ಥಿಗೇ ನೀಡಬೇಕು ಎಂಬ ಅಭಿಪ್ರಾಯವನ್ನು ಸದಸ್ಯರು ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಬಿಬಿಎಂಪಿಯಲ್ಲಿ ಕಾಂಗ್ರೆಸ್ ನಡೆದುಕೊಳ್ಳುತ್ತಿರುವ ರೀತಿ ಸರಿಯಿಲ್ಲ. ಚುನಾವಣೆ ಸಮೀಪಕ್ಕೆ ಬಂದಾಗ ಮಾತ್ರ ಇವರ ನಡವಳಿಕೆಯಲ್ಲಿ ಬದಲಾವಣೆ ಕಂಡು ಬರುತ್ತದೆ ಎಂದು ತಿಳಿಸಿದರು.
ಹೇಗಿದ್ದರೂ ಜೆಡಿಎಸ್’ಗೆ ಕಾಂಗ್ರೆಸ್ ಅನಿವಾರ್ಯ ಎಂಬುದಾಗಿ ಆ ಪಕ್ಷದ ಮುಖಂಡರು ತಿಳಿದುಕೊಂಡಿದ್ದರೆ ಅದು ತಪ್ಪು. ಅಂಥ ಅನಿವಾರ್ಯತೆ ನಮ್ಮ ಪಕ್ಷಕ್ಕಿಲ್ಲ. ಮುಂದೇನು ಮಾಡಬೇಕು ಎಂಬುದರ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕುಮಾರಸ್ವಾಮಿ, ಇದುವರೆಗೂ ಕಾಂಗ್ರೆಸ್ ಪಕ್ಷ ದ ಯಾವುದೇ ಮುಖಂಡರು ನನ್ನನ್ನಾಗಲಿ ಅಥವಾ ದೇವೇಗೌಡರನ್ನಾಗಲಿ ಭೇಟಿ ಮಾಡಿಲ್ಲ. ಚರ್ಚೆಯನ್ನೂ ನಡೆಸಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.