
ಧುಮ್ಕಾ(ಫೆ.22): ರಾಜ್ಯದಲ್ಲಿ ಅರಾಜಕತೆ ಉಂಟು ಮಾಡುತ್ತಿರುವ ಪರಿಣಾಮ ಜಾರ್ಖಂಡ್ ರಾಜ್ಯವು ಪಿಎಫ್ಐ(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯನ್ನು ನಿಷೇಧಿಸಿದೆ.
ಗೃಹ ಇಲಾಖೆಯ ಪ್ರಸ್ತಾವನೆಯನ್ನು ಕಾನೂನು ಇಲಾಖೆಯ ಒಪ್ಪಿಗೆಯ ಮೇರೆಗೆ 1908ರ ಅಪರಾಧ ಕಾನೂನು ತಿದ್ದುಪಡಿ ಕಾಯಿದೆಯ 16ನೇ ಸೆಕ್ಷನ್'ನಡಿ ನಿಷೇಧಗೊಳಿಸಲಾಗಿದೆ.
ಸರ್ಕಾರದ ನಿರ್ಧಾರವನ್ನು ಬಿಜೆಪಿ ಶಾಸಕ ಅನಂತ್ ಓಜಾ ಪ್ರಶಂಸಿಸಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಇಂತಹ ಸಂಘಟನೆಗಳ ವಿರುದ್ಧ ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇನೆ. ಸರ್ಕಾರದ ನಿರ್ಧಾರದಿಂದ ಭಾಗದಲ್ಲಿ ಅನೇಕ ಬದಲಾವಣೆಗಳುಂಟಾಗುತ್ತವೆ' ಎಂದು ತಿಳಿಸಿದರು.
ಫೆ.17ರಂದು ಜಾರ್ಖಂಡ್'ನ ಪಾಕುರ್ ಜಿಲ್ಲೆಯಲ್ಲಿ ಪಿಎಫ್'ಐ ಸಂಘಟನೆ ಸಂಸ್ಥಾಪಕ ದಿನವನ್ನಾಗಿ ಸಂಭ್ರಮಿಸಿತ್ತು.
ಪಿಎಫ್ಐ ಭಾರತದಲ್ಲಿ ನ್ಯಾಷನಲ್ ಡೆವಲಪ್'ಮೆಂಟ್ ಪ್ರಂಟ್ ಗೆ ಉತ್ತರಾಧಿಕಾರಿಯಾಗಿ 2006ರಲ್ಲಿ ಸ್ತಾಪಿತವಾದ ಉಗ್ರವಾದಿ ಮತ್ತು ಉಗ್ರಗಾಮಿ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.