84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚಂದ್ರಶೇಖರ ಕಂಬಾರ್​ ಆಯ್ಕೆ

Published : Sep 27, 2018, 04:39 PM IST
84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚಂದ್ರಶೇಖರ ಕಂಬಾರ್​ ಆಯ್ಕೆ

ಸಾರಾಂಶ

ಇದೇ  ಡಿಸೆಂಬರ್ 7,  8 ಹಾಗೂ 9ರಂದು ಧಾರವಾಡದಲ್ಲಿ ನಡೆಯಲಿರುವ  84ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.

ಧಾರವಾಡ, [ಸೆ. 27]:   84ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್​ ಕಂಬಾರ್​ ಅವರನ್ನು ಆಯ್ಕೆ ಮಾಡಲಾಗಿದೆ.

 ಇಂದು [ಗುರುವಾರ] ಗದಗನಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಚಂದ್ರಶೇಖರ ಕಂಬಾರ್ ಅವರನ್ನು ಆಯ್ಕೆ ಮಾಡಲಾಗಿದೆ.  

 ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ರಾಜ್ಯಾಧ್ಯಕ್ಷ ಮನು ಬಳಿಗಾರ್​ ಅಧಿಕೃತವಾಗಿ ಘೋಷಿಸಿದ್ದಾರೆ.  84ನೇ  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 7,  8 ಹಾಗೂ 9ರಂದು ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ಪ್ರೇಮ ವೈಫಲ್ಯಕ್ಕೆ ಬಲಿಯಾದ ಯುವ ಅರ್ಚಕ; ಪ್ರೀತಿಸಿ ಮದುವೆಗೆ ಒಲ್ಲೆ ಎಂದಳಾ ಪ್ರೇಯಸಿ?
'ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನ್ಯಾಪ್ ಮಾಡ್ತಾರಾ?': ಚವಾಣ್ ಹೇಳಿಕೆಗೆ ನೆಟ್ಟಿಗರು ಕೆಂಡ, ಇದು ಕಾಂಗ್ರೆಸ್‌ನ ಅಸಲಿ ಸಿದ್ಧಾಂತ?