
ನವದೆಹಲಿ: ಇಲ್ಲಿನ ಜವಾಹರಲಾಲ್ ನೆಹರೂ ವಿವಿಯಲ್ಲಿ 2016ರ ಫೆ.9ರಂದು ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ್ದಾರೆ ಎನ್ನಲಾದ ಉಮರ್ ಖಾಲಿದ್ ಮತ್ತು ಇತರ ಇಬ್ಬರು ವಿದ್ಯಾರ್ಥಿಗಳ ಉಚ್ಚಾಟನೆ ಮತ್ತು ಆಗ ಜೆಎನ್‌ಯು ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿದ್ದ ಕನ್ಹಯ್ಯ ಕುಮಾರ್ ಮೇಲೆ 10000 ರು. ದಂಡ ವಿಧಿಸುವ ಕ್ರಮವನ್ನು ಜೆಎನ್‌ಯುನ ಉನ್ನತ ಮಟ್ಟದ ತನಿಖಾ ಸಮಿತಿ ಸಮರ್ಥಿಸಿಕೊಂಡಿದೆ.
ಜೆಎನ್‌ಯುನಲ್ಲಿ 2016ರ ಫೆಬ್ರವರಿ 9ರಂದು ಏರ್ಪಡಿಸಲಾಗಿದ್ದ ಉಗ್ರ ಅಫ್ಜಲ್ ಗುರುವಿನ ಸ್ಮರಣೆ ಕಾರ್ಯಕ್ರಮದಲ್ಲಿ ಉಮರ್ ಖಾಲಿದ್, ಕನ್ಹಯ್ಯ ಕುಮಾರ್ ಸೇರಿದಂತೆ ಇತರರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದರು ಎಂಬುದು ಆರೋಪ. ಈ ಹಿನ್ನೆಲೆಯಲ್ಲಿ ಕಾಲೇಜಿನ ನಿಯಮಗಳನ್ನು ಉಲ್ಲಂಘಿಸಿದ ಇತರೆ 13 ವಿದ್ಯಾರ್ಥಿಗಳ ಮೇಲೆಯೂ ಐವರು ಸದಸ್ಯರ ನೇತೃತ್ವದ ಸಮಿತಿ ದಂಡ ವಿಧಿಸಿದೆ. ಉಗ್ರ ಅಫ್ಜಲ್ ಗುರು ಕಾರ್ಯಕ್ರಮದಲ್ಲಿ ದೇಶದ್ರೋಹದ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ಹಯ್ಯ, ಖಾಲಿದ್, ಅನಿರ್ಬನ್ ಭಟ್ಟಾಚಾರ್ಯರನ್ನು ದೇಶದ್ರೋಹ ಆರೋಪದ ಮೇರೆಗೆ ಬಂಧಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.