
ನವದೆಹಲಿ[ಮೇ.17]: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಾವಿನ ಬೆನ್ನಲ್ಲೇ ಹಲವಾರು ಅನುಮಾನಗಳು ವ್ಯಕ್ತವಾಗಿವೆ.
ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿದ್ದ ರಿಷಿ ಥಾಮಸ್ ಹೆಸರಿನ ವಿದ್ಯಾರ್ಥಿ, ವಿಶ್ವವಿದ್ಯಾನಿಲಯದ ಲೈಬ್ರರಿ ಹೊರಗಿರುವ ರೀಡಿಂಗ್ ರೂಂನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆಯೇ ಇಲ್ಲಿನ ಆಡಳಿತ ಮಂಡಳಿ ಮಧ್ಯಾಹ್ನ ಸುಮಾರು 1 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಧ್ಯಾಪಕರಿಗೆ ಕಾರಣಗಳನ್ನು ವಿವರವಾಗಿ ತಿಳಿಸುವ ಈಮೇಲ್ ಒಂದನ್ನೂ ಕಳುಹಿಸಿದ್ದಾನೆ ಎನ್ನಲಾಗಿದೆ. ಆದರೆ ಈ ಕಾರಣಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.