
ಲಖನೌ[ಜು.02]: ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಮೊರಾದಾಬಾದ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಶ್ನೆ ಕೇಳುವ ಕೆಲ ಪತ್ರಕರ್ತರನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ವಿಚಾರವನ್ನಿಟ್ಟುಕೊಂಡು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸೇರಿದಂತೆ ಇತರ ಪ್ರಮುಖ ವಿಪಕ್ಷ ನಾಯಕರು ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದರೆ, ಇಂಥ ಘಟನೆಯೇ ನಡೆದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ‘ಪತ್ರಕರ್ತರನ್ನು ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು ಎಂಬುದು ಶುದ್ಧ ಸುಳ್ಳು. ಆಸ್ಪತ್ರೆ ಪರಿಶೀಲನೆ ವೇಳೆ ಹಲವು ಪತ್ರಕರ್ತರು ಇದ್ದರು. ಈ ವೇಳೆ ಯಾವುದೇ ಮಾಧ್ಯಮ ಪ್ರತಿನಿಧಿಗಳು ವಾರ್ಡ್ ಒಳಗೆ ಪ್ರವೇಶಿಸದಂತೆ ವಿನಂತಿಸಿಕೊಂಡಿದ್ದೆವು ಅಷ್ಟೇ’ ಎಂದಿದ್ದಾರೆ.
ಆದರೆ, ಆಸ್ಪತ್ರೆಯಲ್ಲಿ ಗದ್ದಲ ಸಂಭವಿಸಬಾರದು ಎಂಬ ಕಾರಣಕ್ಕಾಗಿ ಕೆಲವು ಪತ್ರಕರ್ತರ ಆಸ್ಪತ್ರೆ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡಿರಲಿಲ್ಲ ಎಂದು ಒಪ್ಪಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.