ಬದಲಾಗದ ಬಿಜೆಪಿ ರಾಷ್ಟ್ರಾಧ್ಯಕ್ಷ ಹುದ್ದೆ, ಜೆಪಿ ನಡ್ಡಾ ಕಾರ್ಯಾಧ್ಯಕ್ಷ

Published : Jun 17, 2019, 11:36 PM IST
ಬದಲಾಗದ ಬಿಜೆಪಿ ರಾಷ್ಟ್ರಾಧ್ಯಕ್ಷ ಹುದ್ದೆ, ಜೆಪಿ ನಡ್ಡಾ ಕಾರ್ಯಾಧ್ಯಕ್ಷ

ಸಾರಾಂಶ

ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ತನ್ನ ಪರಿವಾರಕ್ಕೆ ಮೇಜರ್ ಸರ್ಜರಿ ಮಾಡುವ ಮೊದಲ ಹಂತವನ್ನು ತೋರಿಸಿದಂತೆ ಕಾಣುತ್ತಿದೆ. ಜೆಪಿ ನಡ್ಡಾ ಬಿಜೆಪಿ ಕಾರ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿದ್ದಾರೆ.

ನವದೆಹಲಿ[ಜೂ. 17]  ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಡ್ಡಾ ನೇಮಕವನ್ನು ರಾಜನಾಥ್ ಸಿಂಗ್ ಪ್ರಕಟ ಮಾಡಿದ್ದಾರೆ.

ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿ  ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವ ಮಾತುಗಳು ಕೇಳಿ ಬಂದಿದ್ದವು. ಇದೀಗ ಬಿಜೆಪಿ ಸಂಸದೀಯ ಮಂಡಳಿ ಜೆಪಿ ನಡ್ಡಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಹಾಗಾಗಿ ಅಮಿತ್ ಶಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು