
ಮಂಗಳೂರು: ರಾಜ್ಯದಲ್ಲಿ ಮೊಬೈಲ್ ಮತ್ತು ಇತರ ಟವರ್ ಅನುಷ್ಠಾನಕ್ಕೆ ದೇಶದಲ್ಲೇ ಮೊದಲ ಬಾರಿಗೆ ರೂಪಿಸಿರುವ ಟವರ್ ನೀತಿಗೆ ಹೆಸರಾಂತ ಬಾಲಿವುಡ್ ನಟಿ ಜೂಹಿ ಚಾವ್ಲಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಜೂಹಿ ಅವರ ಆಪ್ತ ಸಹಾಯಕ ಮುನ್ಷಿ ಅವರು ಸಚಿವ ಖಾದರ್ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ದೇವಾಲಯ, ಶಾಲೆ, ಆಸ್ಪತ್ರೆಗಳೊಂದಿಗೆ ವಸತಿ ಪ್ರದೇಶಗಳನ್ನೂ ಈ ನೀತಿಯ ಅಡಿಯಲ್ಲಿ ಸೇರಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಇದನ್ನು ಪರಿಶೀಲಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸುದ್ದಿಗಾರರಿಗೆ ತಿಳಿಸಿದರು.
ಟವರ್ ನೀತಿ ಅಧಿಸೂಚನೆ ಪ್ರಕಟವಾದ ಮೂರು ತಿಂಗಳೊಳಗೆ ಎಲ್ಲ ಟವರ್‌ಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಟವರ್‌ಗಳನ್ನೇ ರದ್ದುಗೊಳಿಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ