ಕರ್ನಾಟಕ ಹೈಕೋರ್ಟ್ ಸಿಜೆ ಈಗ ಸುಪ್ರೀಂಕೋರ್ಟ್ ಜಡ್ಜ್

By Web DeskFirst Published Jan 16, 2019, 9:14 PM IST
Highlights

ಸುಪ್ರೀಂಕೋರ್ಟ್ ಕೊಲೀಜಿಯಂ ಶಿಫಾರಸ್ಸಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಕರ್ನಾಟಕ ಹೈಕೋರ್ಟ್ ಸಿಜೆ ಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು, [ಜ.16]: ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿಗೆ ನ್ಯಾಯಮೂರ್ತಿಗೆ ಪದೋನ್ನತಿ ದೊರೆತಿದೆ.

ಸುಪ್ರೀಂಕೋರ್ಟ್ ಕೊಲೀಜಿಯಂ ಶಿಫಾರಸ್ಸಿಗೆ ಇಂದು [ಬುಧವಾರ] ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅಂಕಿತ ಹಾಕಿದ್ದು, ಕರ್ನಾಟಕ ಹೈಕೋರ್ಟ್ ಸಿಜೆ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ತಿಳಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರ ಅಂಕಿತ ಬಿದ್ದ ನಂತರ ಆದೇಶ ಹೊರಡಿಸಲಾಗಿದೆ.

ಜ.10ರಂದು ನಡೆದಿದ್ದ ಸುಪ್ರೀಂಕೋರ್ಟ್ ಕೊಲೀಜಿಯಂ ಸಭೆಯಲ್ಲಿ ನ್ಯಾಯಮೂರ್ತಿಗಳಾದ ಮಹೇಶ್ವರಿ ಹಾಗೂ ಖನ್ನಾ ಹೆಸರು ಅಂತಿಮಗೊಳಿಸಲಾಗಿತ್ತು. 

click me!