ಕಾಂಗ್ರೆಸ್ ಪಟ್ಟಿಯಲ್ಲಿ ಸಿಎಂ ಅಭ್ಯರ್ಥಿಯ ಹೆಸರೇ ನಾಪತ್ತೆ

By Web DeskFirst Published Oct 18, 2018, 7:38 PM IST
Highlights

ಈಗಾಗಲೇ ಮಧ್ಯಪ್ರದೇಶದ ಎಲ್ಲ 230 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು ಕಾಂಗ್ರೆಸ್ ಪರಿಶೀಲನಾ ಸಮಿತಿ ಕೂಡ ಅಭ್ಯರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಡಿದೆ.

ಭೋಪಾಲ್[ಅ.18]: ನವೆಂಬರ್ ನಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಸಿಎಂ ಅಭ್ಯರ್ಥಿ ರೇಸಿನಲ್ಲಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರೆ ಸ್ಪರ್ಧಿಸುವವರ ಅಂತಿಮ ಪಟ್ಟಿಯಲ್ಲಿ ಇಲ್ಲವಂತೆ. 

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ಬಿಜೆಪಿ ಸೃಷ್ಟಿಸಿರುವ ಸುಳ್ಳು ಸುದ್ದಿಯೇ ವಿನಃ ಮತ್ತೇನಿಲ್ಲ ಎಂದಿದೆ. ಜ್ಯೋತಿರಾದಿತ್ಯ ಅವರು ಕೂಡ ಹೇಳಿಕೆ ನೀಡಿದ್ದು, ಪಕ್ಷದ  ಪ್ರಚಾರ ಸಮಿತಿ  ಅಭ್ಯರ್ಥಿಗಳ ಪಟ್ಟಿ ಇನ್ನು ಅಂತಿಮವಾಗಿಲ್ಲ. ಇನ್ನೊಂದು ವಾರದಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿಯಲಿದೆ. ವೈರಲ್ ಆಗಿರುವ ಪಟ್ಟಿ ಎಲ್ಲಿಂದ ಬಂತು ಎಂಬುದರ ಬಗ್ಗೆ ನನಗೂ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ಮಧ್ಯಪ್ರದೇಶದ ಎಲ್ಲ 230 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು ಕಾಂಗ್ರೆಸ್ ಪರಿಶೀಲನಾ ಸಮಿತಿ ಕೂಡ ಅಭ್ಯರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಡಿದೆ. ಎಲ್ಲಡೆ ವೈರಲ್ ಆಗಿರುವ ಪಟ್ಟಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರಿಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಾಂಗ್ರೆಸಿನಲ್ಲಿ ಸಿಎಂ ರೇಸಿನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ, ಕಮಲ್ ನಾಥ್ ಹಾಗೂ ದಿಗ್ವಿಜಯ್ ಸಿಂಗ್ ಮೂವರಿದ್ದು ಪಕ್ಷವೂ ಕೂಡ ಯಾರು ಅಭ್ಯರ್ಥಿಯೆಂದು ಅಂತಿಮಗೊಳಿಸಿಲ್ಲ. ಮಧ್ಯಪ್ರದೇಶದಲ್ಲಿ 2005ರಿಂದ ಬಿಜೆಪಿ ಅಧಿಕಾರದಲ್ಲಿದ್ದು ಶಿವರಾಜ್ ಸಿಂಗ್ ಚೌಹಾಣ್  ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆಯಂತೆ.


 

click me!