ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಿದೆ ಸಾವಿರ ಕೋಟಿ

First Published Jun 24, 2018, 7:45 AM IST
Highlights

 ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು 1050 ಕೋಟಿ ರು. ಬಾಕಿ ಉಳಿಸಿಕೊಂಡಿದ್ದು, ಈ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ಸೋಮವಾರ ದೆಹಲಿಗೆ ತೆರಳುತ್ತಿರುವುದಾಗಿ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರು : ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು 1050 ಕೋಟಿ ರು. ಬಾಕಿ ಉಳಿಸಿಕೊಂಡಿದ್ದು, ಈ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ಸೋಮವಾರ ದೆಹಲಿಗೆ ತೆರಳುತ್ತಿರುವುದಾಗಿ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಉಪಕಾರ್ಯದರ್ಶಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ಯೋಜನೆ ಅಡಿ ಕೇಂದ್ರ ಸರ್ಕಾರದಿಂದ ಅನುದಾನ ಬರದಿದ್ದರಿಂದ ರಾಜ್ಯ ಸರ್ಕಾರವೇ ಈ ಮೊತ್ತವನ್ನು ಭರಿಸಿದೆ. ಬಾಕಿ ಮೊತ್ತ ಶೀಘ್ರ ಬಿಡುಗಡೆ ಮಾಡುವಂತೆ ಸೋಮವಾರ ಕೇಂದ್ರ ಆರ್‌ಡಿಪಿಆರ್‌ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.

ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಸ್ವತ್ತುಗಳಲ್ಲಿ ಸ್ಥಳಾವಕಾಶ ಇರುವ ಕಡೆ ಗಿಡನೆಡುವ ಕಾರ್ಯಕ್ರಮ ರೂಪಿಸಲು ಉದ್ಯೋಗ ಖಾತರಿ ಯೋಜನೆ ಅಡಿ ಕ್ರಿಯಾ ಯೋಜನೆ ರೂಪಿಸಲಾಗುವುದು. ಅಲ್ಲದೇ, ತೋಟಗಾರಿಕೆ ನಿರತ ರೈತರಿಗೆ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

click me!