
ಮೈಸೂರು : ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲೂಕು ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ ಭರ್ತಿಯಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಭರ್ತಿಯಾದ 2 ನೇ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಬಾಗಿನಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ತುಂಗಾ ಅಣೆಕಟ್ಟೆ ಭರ್ತಿಯಾಗಿತ್ತು. ಇದಾದ ನಂತರ ಭರ್ತಿ ಆದ ಜಲಾಶಯ ಕಬಿನಿಯಾಗಿದೆ.
ಸಾಮಾನ್ಯವಾಗಿ ಜುಲೈ ತಿಂಗಳ ಮಧ್ಯ ಭಾಗದಲ್ಲಿ ಕಬಿನಿ ಜಲಾಶಯ ಭರ್ತಿಯಾಗುತ್ತದೆ. ಆದರೆ ಈ ಬಾರಿ ಪೂರ್ವಮುಂಗಾರು ಭರ್ಜರಿಯಾಗಿ ಆರಂಭವಾಗಿದ್ದರಿಂದ ಜೂನ್ ಮಧ್ಯ ಭಾಗದಲ್ಲಿಯೇ ಭರ್ತಿಯಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಗರಿಷ್ಠ 35000 ಕ್ಯುಸೆಕ್‌ವರೆಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಯಿತು. ಇದೀಗ ಒಳಹರಿವು 21500 ಕ್ಯುಸೆಕ್ ಇದ್ದು, ಜಲಾಶಯದಿಂದ 5000 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ಭಾನುವಾರ ಜಲಾಶಯದ ನೀರಿನ ಮಟ್ಟ 2,280.05 ಅಡಿ ಇದ್ದು, ಗರಿಷ್ಠ ಮಟ್ಟ 2284 ಅಡಿ. ಈ ಜಲಾಶಯದಿಂದ ಬಿಡುಗಡೆಯಾಗುವ ನೀರು ನೇರವಾಗಿ ನಂಜನಗೂಡು, ಟಿ. ನರಸೀಪುರ, ಕೊಳ್ಳೇಗಾಲ, ಪಾಲಾರ್ ಮೂಲಕ ತಮಿಳುನಾಡಿನ ಮೆಟ್ಟೂರು ಜಲಾಶಯ ಸೇರುತ್ತದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾಲಾವಕಾಶ ನೋಡಿಕೊಂಡು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಿದ್ದತೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.