ಅವಾಚ್ಯ ಪದ ಬಳಸಿದ್ದಕ್ಕೆನಿರಂಜನಾನಂದ ವಿಷಾದ

Published : Jun 08, 2017, 12:11 PM ISTUpdated : Apr 11, 2018, 12:34 PM IST
ಅವಾಚ್ಯ ಪದ ಬಳಸಿದ್ದಕ್ಕೆನಿರಂಜನಾನಂದ ವಿಷಾದ

ಸಾರಾಂಶ

ಕುರುಬ ಸಮಾಜದ ಸಭೆಯಲ್ಲಿ ಕಾಗಿನೆಲೆ ಶಾಖಾ ಮಠದ ನಿರಂಜನಾನಂದಪುರಿ ಸ್ವಾಮೀಜಿ ಆಡಿದ್ದ ಅವಾಚ್ಯ ಮಾತುಗಳನ್ನು ಧ್ವನಿ ಮುದ್ರಿಸಿ, ಮಾಧ್ಯಮಕ್ಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಶ್ರೀಗಳು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ದಾವಣಗೆರೆ: ಕುರುಬ ಸಮಾಜದ ಸಭೆಯಲ್ಲಿ ಕಾಗಿನೆಲೆ ಶಾಖಾ ಮಠದ ನಿರಂಜನಾನಂದಪುರಿ ಸ್ವಾಮೀಜಿ ಆಡಿದ್ದ ಅವಾಚ್ಯ ಮಾತುಗಳನ್ನು ಧ್ವನಿ ಮುದ್ರಿಸಿ, ಮಾಧ್ಯಮಕ್ಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಶ್ರೀಗಳು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಇದರ ಬೆನ್ನಲ್ಲೇ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಜೂನ್‌ 2ರಂದು ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದ ಕಾಗಿನೆಲೆ ಪೀಠದ ಶಾಖಾ ಮಠದಲ್ಲಿ ನಾಲ್ಕು ಗೋಡೆ ಮಧ್ಯೆ ನಡೆದ ಕುರುಬ ಸಮಾಜದ ಸಮಸ್ಯೆ, ಮಠದ ಕಾರ್ಯಗಳ ಕುರಿತ ಸಭೆಯಲ್ಲಿ ಆದ ಚರ್ಚೆ ವಿಚಾರವನ್ನು ಕಾಣದ ಕೈಗಳು ಧ್ವನಿ ಮುದ್ರಿಸಿಕೊಂಡು, ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟಿದ್ದು ನಿಜಕ್ಕೂ ಬೇಸರ ತಂದಿದೆ.

ಇದರಿಂದ ತಾವು ಮನ ನೊಂದು ವಿಷಾದಿಸುತ್ತೇವೆ ಎಂದು ಶ್ರೀಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?