ಚುನಾವಣಾ ರಾಜಕೀಯಕ್ಕೆ ಕಾಗೋಡು ವಿದಾಯ

By Web DeskFirst Published Aug 1, 2018, 10:48 AM IST
Highlights

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಹಿರಿಯ ನಾಯಕರು ಚುನಾವಣಾ ನಿವೃತ್ತಿ ಮಾತನಾಡಿರುವುದು ಕಾಂಗ್ರೆಸ್‌ಗೆ ಹಿನ್ನಡೆ ಉಂಟುಮಾಡುವ ಸಾಧ್ಯತೆ ಇದೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ವಯಸ್ಸಾಯಿತು. ಮಾಡೋ ಕೆಲಸ ಎಲ್ಲಾ ಮಾಡಿದ್ದೇನೆ. ಇಷ್ಟೇ ಸಾಕು. ಇನ್ನು ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತೇನೆ. ಸಮಾಜದಲ್ಲಿ ಬೇರೆ ರೀತಿಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಚುನಾವಣಾ ರಾಜಕೀಯ ಸಾಕಾಗಿದೆ ಎಂದು ಹೇಳುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲೂ ತೊಡಗಿಸಿಕೊಳ್ಳುವುದಿಲ್ಲ ಎಂಬ ಸಂದೇಶ ರವಾನಿಸಿದರು.

1961 ರಲ್ಲಿ ತಾಲೂಕು ಬೋರ್ಡ್ ಸದಸ್ಯನಾಗಿ ರಾಜಕೀಯ ಪ್ರವೇಶಿಸಿದ ಅವರು, ಗುಂಡೂರಾವ್, ವೀರಪ್ಪ ಮೊಯ್ಲಿ, ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು. 2013 ರಲ್ಲಿ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು.

click me!