
ಕೋಲಾರ: ಮಕ್ಕಳ ರಕ್ಷಣೆಯಾಗದೆ ದೇಶದ ರಕ್ಷಣೆ ಸಾಧ್ಯವಿಲ್ಲ, ದೇಶ ವಿವಿಧ ರಂಗಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಹೆಮ್ಮೆಯ ಸಂಗತಿಯಾದರೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಂದಾಗಿ ತಲೆ ತಗ್ಗಿಸುವಂತಾಗಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಪಂನಿಂದ ನಗರದ ಚೆನ್ನಯ್ಯರಂಗಮಂದಿರದಲ್ಲಿ ಆಯೋಜಿಸಿದ್ದ ‘ಭಾರತ ಯಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಮಕ್ಕಳ ದೌರ್ಜನ್ಯಸಂಬಂಧ ಶೇ.4ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗುತ್ತಿದೆ. ಉಳಿದವುಗಳಲ್ಲಿ ಕೆಲವು ಸಾಕ್ಷ್ಯಗಳಿಲ್ಲದೆ ಖುಲಾಸೆಯಾದರೆ, ಮತ್ತಷ್ಟು ಪ್ರಕರಣಗಳು ಇತ್ಯರ್ಥ ಆಗದೆ ಉಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.