Aug 9, 2018, 9:24 PM IST
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಮಾರುತಿ ಮಾನ್ಪಡೆ ನಾಲಿಗೆ ಹರಿಬಿಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡುತ್ತಾ ಏಕವಚನದಲ್ಲಿ ನಿಂದಿಸಿದ್ದಾರೆ. ಮೋದಿ ಅವರ ತಾಯಿಯ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. 7 ನೇ ವೇತನ ಆಯೋಗದ ಶಿಫಾರಸಿನಂತೆ ಕನಿಷ್ಠ ವೇತನ ನಿಗದಿಯಾಗಬೇಕು, ವಿಮಾ ಯೋಜನೆ ಸಂಪೂರ್ಣ ಬದಲಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.