
ಕಲಬುರಗಿ (ಏ.5): ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಾಗಲಕೋಟೆಯ ಐವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಲಬುರಗಿಯ ದರ್ಗಾ ಭೇಟಿ ನೀಡಲು ಬಾಗಲಕೋಟೆ ನಿವಾಸಿಗಳು ಟಿಟಿಯಲ್ಲಿ ಆಗಮಿಸುತ್ತಿದ್ದರು. ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತ ಲಾರಿಗೆ ಹಿಂದಿನಿಂದ ಟಿಟಿ ಟೆಂಪೋ ಡಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆಯುವ ವೇಳೆ 26 ಕ್ಕೂ ಹೆಚ್ಚು ಜನರು ಟಿಟಿ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದರು. ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ನಾಲ್ವರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಕಲಬುರಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಹಲವರನ್ನು ಕಲಬುರಗಿ ಹಾಗೂ ಜೇವರ್ಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಕನ್ನಡಿಗರಿಗೆ ಕುಡಿಯಲು ನೀರಿಲ್ಲ, ಕೃಷ್ಣ-ಭೀಮಾ ನದಿಗೆ ನೀರು ಬಿಡಿ: ಮಹಾರಾಷ್ಟ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ!
ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಇವರು ಬರುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಜೇವರ್ಗಿ ಹಾಗೂ ನೆಲೋಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆಯ ವೇಳೆ ಟಿಟಿಯಲ್ಲಿ 26ಕ್ಕೂ ಹೆಚ್ಚು ಜನರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡ 11 ಜನರನ್ನು ಕಲಬುರಗಿ ಹಾಗೂ ಜೇವರ್ಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಕಲಬುರಗಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಆಯುಕ್ತ! ಏನಿದು ಪ್ರಕರಣ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.