ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿ ಬಂಧನ!

Published : Apr 22, 2019, 06:55 PM IST
ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿ ಬಂಧನ!

ಸಾರಾಂಶ

ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಖಾಸಗಿ ಬಸ್ ಸಿಬ್ಬಂದಿ| ತಿರುವನಂತಪುರಂನಿಂದ ಬೆಂಗಳೂರಿಗೆ ಹೊರಟಿದ್ದ ಕಲ್ಲಡ ಟ್ರಾವೆಲ್ಸ್ ಬಸ್| ಬಸ್ ಕೆಟ್ಟು ನಿಂತಿದ್ದನ್ನು ಪ್ರಶ್ನಿಸಿದ ಇಬ್ಬರು ಪ್ರಯಾಣಿಕರ ಮೇಲೆ ಹಲ್ಲೆ| ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಬಂಧಿಸಿದ ಪೊಲೀಸರು|

ತಿರುವನಂತಪುರಂ(ಏ.22): ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ, ಖಾಸಗಿ ಪ್ರಯಾಣಿಕ ಸಾರಿಗೆ ಸಂಸ್ಥೆ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ತಿರುವನಂತಪುರಂನಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಲಡ ಟ್ರಾವೆಲ್ಸ್ ಬಸ್ ಅಲ್ಲಪುಜಾ ಬಳಿ ಕೆಟ್ಟು ನಿಂತಿದೆ. ಈ ವೇಳೆ ಮತ್ತೊಂದು ಬಸ್ ನಲ್ಲಿ ಪರಯಾಣಿಕರನ್ನು ವೈತಿಲಾಗೆ ಕರೆತರಲಾಗಿದೆ.

"

ಇದನ್ನು ಪ್ರಶ್ನಿಸಿದ ಇಬ್ಬರು ಪ್ರಯಾಣಿಕರ ಮೇಲೆ ಬಸ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಪ್ರಯಾಣಿಕರೋರ್ವರು ಹಲ್ಲೆಯ ವಿಡಿಯೋ ಮಾಡಿದ್ದಾರೆ. 

ಸದ್ಯ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಸಿಬ್ಬಂದಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!