
ಹಾವೇರಿ, [ಅ.28]: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ಮೀ ಟೂ ಪ್ರಕಟರಣ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
ಮೀ ಟೂ ಅಭಿಯಾನದ ಮೂಲಕ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ಆರೋಪದ ಹಿಂದೆ ಷಡ್ಯಂತ್ರದ ಅನುಮಾನವಿದೆ. ಕ್ರಿಶ್ಚಿಯನ್ ಮಿಷನರಿಗಳ ಕೈವಾಡ ಇದ್ದರೂ ಇರಬಹುದು ಎಂದು ಆರ್‌ಎಸ್‌ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೂಗಳು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡಾಗ ಇಂತಹ ಷಡ್ಯಂತ್ರ ನಡೆಯುತ್ತವೆ.
ಅರ್ಜುನ್ ಸರ್ಜಾ ವಿರುದ್ಧವೂ ಇದೇ ರೀತಿ ಆಗಿರಬಹುದು. ಸರ್ಜಾ ಪರ ಇಡೀ ಚಿತ್ರತಂಡವೇ ಇದೆ. ಮೀ ಟೂ ಅಭಿಯಾನ ಒಳ್ಳೆಯದೆ. ಆದರೆ, ಅದನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.