
ಚೆನ್ನೈ : ತಮಿಳುನಾಡಿನಲ್ಲಿ ಸ್ಟಾರ್ ನಟರ ರಾಜಕೀಯ ಪ್ರವೇಶದಿಂದ ರಾಜಕಾರಣವು ಸಾಕಷ್ಟು ರಂಗೇರುತ್ತಿದೆ. ಇತ್ತೀಚೆಗಷ್ಟೇ ನಟ ರಜನಿಕಾಂತ್ ಅವರು ತಮಿಳುನಾಡಿನಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಲುವಾಗಿ ತಮ್ಮದೇ ಆದ ನೂತನ ಪಕ್ಷವನ್ನು ಘೋಷಣೆ ಮಾಡಿದ್ದರು.
ಅದರ ಬೆನ್ನಲ್ಲೇ ನಟ ಕಮಲ್ ಹಾಸನ್ ಅವರು ತಮ್ಮ ರಾಜಕೀಯ ಜೀವನವನ್ನು ಆರಂಭ ಮಾಡುವ ಬಗ್ಗೆಯೂ ಕೂಡ ಸುಳಿವು ನೀಡಿದ್ದರು. ಆದರೆ ಅವರು ತಮ್ಮದೇ ಆದ ಪಕ್ಷವನ್ನು ಘೋಷಣೆ ಮಾಡುತ್ತಾರೋ ಅಥವಾ ಯಾವುದಾದರೂ ರಾಜಕೀಯ ಪಕ್ಷದೊಂದಿಗೆ ಕೈ ಜೋಡಿಸುತ್ತಾರೋ ಎನ್ನುವುದು ಎಲ್ಲರ ಪ್ರಶ್ನೆಯಾಗಿತ್ತು.
ಆದರೆ ಇದೀಗ ರಜನಿಕಾಂತ್ ಅವರ ಪಕ್ಷದೊಂದಿಗೆ ಕೈ ಜೋಡಿಸಿ ತಮ್ಮ ರಾಜಕೀಯ ಜೀವನವನ್ನು ಆರಂಭಿಸುವ ಬಗ್ಗೆ ಕಮಲ್ ಹಾಸನ್ ಸುಳಿವು ನೀಡಿದ್ದಾರೆ. ಈ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಇನ್ನೂ ಯಾವುದೇ ರೀತಿಯಾದ ತೀರ್ಮಾನವನ್ನು ಕೈಗೊಂಡಿಲ್ಲ ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಇನ್ನು ರಜನಿಕಾಂತ್ ಅವರೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಇದೇ ರೀತಿಯಾದ ಉತ್ತರವನ್ನೇ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.