ಕಂಬಳ ಮಸೂದೆ ನಾಳೆ ಮಂಡನೆ

Published : Feb 08, 2017, 04:42 PM ISTUpdated : Apr 11, 2018, 12:51 PM IST
ಕಂಬಳ ಮಸೂದೆ ನಾಳೆ ಮಂಡನೆ

ಸಾರಾಂಶ

ಬೆಂಗಳೂರು (ಫೆ.08): ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಎದುರಾಗಿರುವ ಅಡ್ಡಿ ನಿವಾರಿಸಲು ಸರ್ಕಾರ ಮಸೂದೆ ಸಿದ್ಧಪಡಿಸಿದ್ದು, ಗುರುವಾರ ಸದನದಲ್ಲಿ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ಬೆಂಗಳೂರು (ಫೆ.08): ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಎದುರಾಗಿರುವ ಅಡ್ಡಿ ನಿವಾರಿಸಲು ಸರ್ಕಾರ ಮಸೂದೆ ಸಿದ್ಧಪಡಿಸಿದ್ದು, ಗುರುವಾರ ಸದನದಲ್ಲಿ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ವಿಧಾನಸಭೆಯಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆದ ಕಾಂಗ್ರೆಸ್‌ನ ಅಭಯ್ ಚಂದ್ರ ಜೈನ್ ಸರ್ಕಾರ ತಮಿಳುನಾಡಿನ ಮಾದರಿಯಲ್ಲಿ ರಾಜ್ಯದಲ್ಲೂ ಸುಗ್ರೀವಾಜ್ಞೆ ಹೊರಡಿಸಿ ಕಂಬಳ ಕ್ರೀಡೆಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಜಯಚಂದ್ರ, ಸದ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಮಸೂದೆಯನ್ನೇ ಮಂಡಿಸಿ ಜಾರಿಗೊಳಿಸಲಿದೆ ಎಂದರು. ಕಂಬಳ ಕ್ರೀಡೆ, ಎತ್ತಿನ ಬಂಡಿ ಓಟ ನಡೆಸಲು ಅನುಕೂಲವಾಗುವಂತೆ ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ಕ್ಕೆ ತಿದ್ದುಪಡಿ ತರುವ ಮಸೂದೆ ಮಂಡನೆಗೆ ನಿರ್ಧಾರವಾಗಲಿದೆ ಎಂದು ಸಚಿವರು ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್
ರೇ*ಪ್ ಆರೋಪಿ ಜೊತೆ ಸೇರಿಕೊಂಡು ವ್ಯಕ್ತಿ ವಿರುದ್ಧ ಸುಳ್ಳು ರೇ*ಪ್‌ ಕೇಸ್ ಹಾಕಿದ ಮಹಿಳೆ ಬಂಧನ