
ಭೋಪಾಲ್: ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆರ್‌ಎಸ್‌ಎಸ್ ಕುರಿತಾಗಿ ಪ್ರಕಟಿಸಿದ ವಿವಾದ ತಣ್ಣಗಾಗುವ ಮುನ್ನವೇ, ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲ್‌ನಾಥ್ ಅವರು ಮಹಿಳೆಯರ ಕುರಿತಾಗಿ ಆಡಿರುವ ಮಾತುಗಳು ವಿವಾದದ ಸ್ವರೂಪ ಪಡೆದಿವೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಹಿಳೆಯರಿಗೆ ನಿರೀಕ್ಷಿಸಿದ ಮಟ್ಟದಲ್ಲಿ ಟಿಕೆಟ್ ಪ್ರಾಪ್ತವಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಗೆಲ್ಲುವ ಸಾಮರ್ಥ್ಯವಿರುವ ಎಲ್ಲ ಮಹಿಳೆಯರಿಗೂ ಟಿಕೆಟ್ ನೀಡಲಾಗಿದೆ. ಕೇವಲ ಮೀಸಲಾತಿ ಅಥವಾ ಅಲಂಕಾರಕ್ಕಾಗಿ ಮಹಿಳೆಯರಿಗೆ ಟಿಕೆಟ್ ಕೊಡುವ ಹಾದಿಯನ್ನು ನಾವು ತುಳಿದಿಲ್ಲ’ ಎಂದು ಹೇಳಿದ್ದಾರೆ.
ಈ ಹೇಳಿಕೆಯನ್ನೇ ಪ್ರಚಾರದ ಸರಕಾಗಿ ಬಳಸಿಕೊಂಡಿರುವ ಬಿಜೆಪಿ, ಈ ಹೇಳಿಕೆ ಕುರಿತು ಕಮಲ್‌ನಾಥ್ ಅವರು ಕ್ಷಮಾಪಣೆ ಕೋರಬೇಕು ಎಂದು ಆಗ್ರಹಿಸಿದೆ. ಇತ್ತೀಚೆಗಷ್ಟೇ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆಗೇರಿದಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ ಆರ್‌ಎಸ್‌ಎಸ್ ಸಭೆಗಳ ಮೇಲೆ ನಿಷೇಧ ಹೇರಲಾಗುತ್ತದೆ. ಅಲ್ಲದೆ, ಸರ್ಕಾರಿ ಸಿಬ್ಬಂದಿಗಳು ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವುದನ್ನು ನಿಷೇಧಿಸಲಾಗುತ್ತದೆ ಎಂದು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ