
ಪಟನಾ: ಜೆಎನ್‌ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಬಿಹಾರದ ಬೇಗುಸರಾಯ್ ಕ್ಷೇತ್ರದಿಂದ ಕನ್ಹಯ್ಯಾ ಕಣಕ್ಕಿಳಿಯಲಿದ್ದು, ಅವರನ್ನು ಆರ್‌ಜೆಡಿ, ಕಾಂಗ್ರೆಸ್, ಎನ್‌ಸಿಪಿ, ಹಿಂದೂಸ್ತಾನಿ ಅವಾಂ ಮೋರ್ಚಾ, ಲೋಕತಾಂತ್ರಿಕ್ ಜನತಾದಳ, ಎಡಪಕ್ಷಗಳ ಬೆಂಬಲಿಸಲಿವೆ ಎನ್ನಲಾಗಿದೆ.
ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಯ ಭೋಲಾ ಸಿಂಗ್, ಆರ್‌ಜೆಡಿ ಅಭ್ಯರ್ಥಿಯನ್ನು 58000 ಮತಗಳಿಂದ ಸೋಲಿಸಿದ್ದರು. ಆದರೆ, ವಿಪಕ್ಷಗಳು ಒಗ್ಗೂಡಿ ಕಣಕ್ಕಿಳಿದರೆ ಕನ್ಹಯ್ಯಾ ಗೆಲುವು ಸುಲಭ ಎಂಬುದು ವಿಪಕ್ಷಗಳ ಲೆಕ್ಕಾಚಾರ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.