ಬ್ಯಾಂಕ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ

By Suvarna Web DeskFirst Published Sep 10, 2017, 8:03 AM IST
Highlights

ಈ ಮೊದಲು IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶವಿತ್ತು. ಆದರೆ, ಈ ವರ್ಷ ಕನ್ನಡದಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಬೆಂಗಳೂರು(ಸೆ.10): ಗ್ರಾಮೀಣ  ಬ್ಯಾಂಕ್'ಗಳಿಗೆ ನೌಕರರನ್ನು ನೇಮಿಸಿಕೊಳ್ಳಲು ಬ್ಯಾಂಕ್ ಸಿಬ್ಬಂದಿ ನೇಮಕ ಸಂಸ್ಥೆ (IBPS) ನಡೆಸುವ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ಸ್ಥಗಿತಗೊಳಿಸಿದ್ದರ ವಿರುದ್ಧ ಸಿಡಿದೆದ್ದ ಕನ್ನಡಿಗರು ಪರೀಕ್ಷೆಯೇ ನಡೆಯ ದಂತೆ ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೆ ಈ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶವಿತ್ತು. ಆದರೆ, ಕೆಲವು ವರ್ಷಗಳಿಂದ ಪ್ರಾದೇಶಿಕ ಭಾಷೆಯಲ್ಲಿ ಬರೆಯುವ ಅವಕಾಶವನ್ನು ಸ್ಥಗಿತಗೊಳಿಸ–

ಲಾಗಿದ್ದು, ಹಿಂದಿ ಮತ್ತು ಇಂಗ್ಲಿಷ್'ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಮಾಡಲಾಗಿದೆ. ಇದು ಕನ್ನಡಿಗರ ಉದ್ಯೋಗಾವಕಾಶವನ್ನು ಕಿತ್ತುಕೊಳ್ಳುವ ಹುನ್ನಾರ ಎಂದು ಕನ್ನಡ ಸಂಘಟನೆಗಳು ಹಾಗೂ ಪರೀಕ್ಷಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ  ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಕಲ್ಬುರ್ಗಿ, ಬಳ್ಳಾರಿ, ಶಿವಮೊಗ್ಗ,  ದಾವಣಗೆರೆ ಸೇರಿ 20ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಪರೀಕ್ಷೆ ನಡೆಯಲು ಕನ್ನಡ ಸಂಘಟನೆಗಳು ಅವಕಾಶ  ನೀಡಿಲ್ಲ. ಅಲ್ಲದೆ, ಇಂದು ನಡೆಯಲಿರುವ ಎರಡನೇ ದಿನದ ಪರೀಕ್ಷೆಯನ್ನು ಸಹ ತಡೆಗಟ್ಟಲು  ನಿರ್ಧರಿಸಿವೆ.

ಈ ಮೊದಲು IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶವಿತ್ತು. ಆದರೆ, ಈ ವರ್ಷ ಕನ್ನಡದಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಇದರಿಂದಾಗಿ ಗ್ರಾಮೀಣ  ಬ್ಯಾಂಕ್'ಗಳ ನೇಮಕಾತಿಗಾಗಿ ನಡೆಯುವ ಈ ಪರೀಕ್ಷೆಗೆ ಹೊರ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಬಂದಿದ್ದಾರೆ. ಇದು ಕನ್ನಡಿಗರನ್ನು ಕಂಗೆಡಿಸಿದ್ದು, ಹೋರಾಟಕ್ಕೆ ನಾಂದಿ ಹಾಡಿದೆ.

click me!