ಸಿಂಗಾಪುರ ಏರ್‌ಲೈನ್ಸ್‌ನಲ್ಲೂ ಕನ್ನಡ; ದೇಶಿಯ ವಿಮಾನಗಳಲ್ಲೇಕಿಲ್ಲ?

Published : May 01, 2018, 02:22 PM ISTUpdated : May 01, 2018, 02:32 PM IST
ಸಿಂಗಾಪುರ ಏರ್‌ಲೈನ್ಸ್‌ನಲ್ಲೂ ಕನ್ನಡ; ದೇಶಿಯ ವಿಮಾನಗಳಲ್ಲೇಕಿಲ್ಲ?

ಸಾರಾಂಶ

ಸಿಂಗಾಪುರ ಏರ್‌ಲೈನ್ಸ್‌ನಲ್ಲಿ ಊಟದ ಮೆನು, ಪ್ರಕಟಣೆಗಳು ಕನ್ನಡದಲ್ಲಿ ರಾಜಕೀಯ ತಿರುವು ಪಡೆದುಕೊಂಡ ಪ್ರಧಾನ ಕಾರ್ಯದರ್ಶಿ ಟ್ವೀಟ್ ಕೇಂದ್ರ ಸರ್ಕಾರದ  ಹಿಂದಿ ಹೇರಿಕೆ ನೀತಿ ಟೀಕಿಸಿದ ಸಿದ್ದರಾಮಯ್ಯ   

ಬೆಂಗಳೂರು (ಮೇ. 01): ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್, ಕನ್ನಡದ ಬಗ್ಗೆ  ಮಾಡಿರುವ ಟ್ವೀಟ್ ಇದೀಗ ’ಹಿಂದಿ ಹೇರಿಕೆ’ಯ ರಾಜಕೀಯ ತಿರುವನ್ನು ಪಡೆದುಕೊಂಡಿದೆ.

ಸಿಂಗಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುವ ಸಿಂಗಾಪುರ ಏರ್‌ಲೈನ್ಸ್ [ವಿಮಾನ ಸಂಖ್ಯೆ- SQ502] ನಲ್ಲಿ  ಊಟದ ಮೆನು ಹಾಗೂ ಪ್ರಕಟಣೆಗಳನ್ನು ನಿರರ್ಗಳವಾಗಿ ಕನ್ನಡದಲ್ಲಿ ಮಾಡಲಾಗುತ್ತದೆ.  ಬೆಂಗಳೂರಿಗೆ ಬರುವ  ಹಾಗೂ ಇಲ್ಲಿಂದ ಹೊರಡುವ ವಿಮಾನಗಳಲ್ಲಿ ಈ ವ್ಯವಸ್ಥೆಯೇಕೆ ಸಾಧ್ಯವಿಲ್ಲ? ಇದು ಬಹಳ ಕಷ್ಟವಾದುದೇನಲ್ಲ.. ಎಂದು ಟ್ವೀಟಿಸಿದ್ದರು. 

ಅದಕ್ಕೆ ಪ್ರತಿಕ್ರಿಯಿಸುತ್ತಾ ರೀಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇದು ವಿಮಾನಯಾನ ಸಂಸ್ಥೆಗಳ ಸಾಮರ್ಥ್ಯಕ್ಕಿಂತ ಹೆಚ್ಚಾಗಿ, ಕೇಂದ್ರ ವಿಮಾನಯಾನ ಸಚಿವಾಲಯದ  ಹಿಂದಿ ಹೇರಿಕೆಗೆ ಸಂಬಂಧಪಟ್ಟ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಈ ಚರ್ಚೆಯಲ್ಲಿ ಪಾಲ್ಗೊಂಡ ಇತರ ಟ್ವಿಟರಿಗರು ಕೂಡಾ ವಿಮಾನಯಾನ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌