ಕನ್ನಡದ ಉರ್ವಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

Published : Apr 06, 2017, 04:57 PM ISTUpdated : Apr 11, 2018, 01:11 PM IST
ಕನ್ನಡದ ಉರ್ವಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಸಾರಾಂಶ

ಲೈಂಗಿಕ ಕಾರ್ಯಕರ್ತೆಯರ ಸಬಲೀಕರಣದ ಕುರಿತಾದ ಮತ್ತು ಬಿ.ಎಸ್.ಪ್ರದೀಪ್ ವರ್ಮಾ ಅವರ ಮೊದಲ ನಿರ್ದೇಶನದ ಕನ್ನಡ ಚಿತ್ರ ‘ಉರ್ವಿ’ ಅಮೆರಿಕದಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ನ್ಯೂಯಾರ್ಕ್ (ಏ.06): ಲೈಂಗಿಕ ಕಾರ್ಯಕರ್ತೆಯರ ಸಬಲೀಕರಣದ ಕುರಿತಾದ ಮತ್ತು ಬಿ.ಎಸ್.ಪ್ರದೀಪ್ ವರ್ಮಾ ಅವರ ಮೊದಲ ನಿರ್ದೇಶನದ ಕನ್ನಡ ಚಿತ್ರ ‘ಉರ್ವಿ’ ಅಮೆರಿಕದಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಬುಧವಾರ ರಾತ್ರಿ ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಡೀ ಫಿಲಂ ಪ್ರಶಸ್ತಿ ಸಮಾರಂಭದಲ್ಲಿ ಉತ್ತಮ ಚಿತ್ರ ಎಂಬ ಖ್ಯಾತಿಯನ್ನು ಸ್ಯಾಂಡಲ್‌ವುಡ್‌ನ ‘ಉರ್ವಿ’ ಪಡೆದುಕೊಂಡಿದೆ. ಶೃತಿ ಹರಿಹರನ್, ಶ್ವೇತಾ ಪಂಡಿತ್ ಮತ್ತು ‘ಯು ಟರ್ನ್’ ಚಿತ್ರದಲ್ಲಿ ಅಮೋಘ ಅಭಿನಯದ ಮೂಲಕ ಗಮನ ಸೆಳೆದಿದ್ದ ಶ್ರದ್ಧಾ ಶ್ರೀನಾಥ್ ಅಭಿನಯದ ಉರ್ವೀ ಚಿತ್ರ ಜನರ ಗಮನ ಸೆಳೆದಿತ್ತು. ಅಲ್ಲದೆ, ಹಲವು ಅಂತಾರಾಷ್ಟ್ರೀಯ ಫೆಸ್ಟಿವಲ್‌ಗಳ ಪ್ರಶಸ್ತಿಗಳಿಗಾಗಿನ ಪೈಪೋಟಿಯಲ್ಲಿ ಚಿತ್ರ ತೀವ್ರ ಸ್ಪರ್ಧೆಯೊಡ್ಡುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ