
ವಿಧಾನಸಭೆ: ರಾಜ್ಯದಲ್ಲಿ ನೆಲೆಸಿರುವ ನಾಲ್ಕು ಲಕ್ಷಕ್ಕೂ ಅಧಿಕ ಬಾಂಗ್ಲಾದೇಶೀಯರ ಕುರಿತು ‘ಕನ್ನಡಪ್ರಭ- ಸುವರ್ಣ ನ್ಯೂಸ್’ ಪ್ರಕಟಿಸಿದ್ದ ವರದಿ ಮಂಗಳವಾರ ಪ್ರತಿಧ್ವನಿಸಿತು. ಮಂಗಳವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ವೈ.ಎ.ನಾರಾಯಣ ಸ್ವಾಮಿ ಅವರು ಬಾಂಗ್ಲಾ ಅಕ್ರಮ ವಲಸೆ ಕುರಿತು ಗೃಹ ಸಚಿವರನ್ನು ಪ್ರಶ್ನಿಸುತ್ತಾ, ಈ ಬಗ್ಗೆ ‘ಕನ್ನಡಪ್ರಭ’ ಪ್ರಕಟಿಸಿದ ವರದಿಯ ಪ್ರತಿಯನ್ನು ಪ್ರದರ್ಶಿಸಿದರು.
ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಆರ್. ರಾಮಲಿಂಗಾರೆಡ್ಡಿ, ರಾಜ್ಯದಲ್ಲಿ ಅಕ್ರಮವಾಗಿ ವಾಸವಾಗಿರುವ ಬಾಂಗ್ಲಾ ದೇಶೀಯರ ಪತ್ತೆಗೆ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಿದರು.
ಇದಕ್ಕೆ ತೃಪ್ತಗೊಳ್ಳದ ಶಾಸಕ ನಾರಾಯಣ ಸ್ವಾಮಿ, ಅಕ್ರಮ ವಲಸಿಗರಿಗೆ ಆಧಾರ್‌ಕಾರ್ಡ್, ರೇಷನ್ ಕಾರ್ಡ್‌ಗಳನ್ನು ಕೂಡ ಕೊಡಲಾಗಿದೆ ಎಂದು ಆರೋಪಿಸಿದರೆ, ಶಾಸಕ ಸತೀಶ್ ರೆಡ್ಡಿ, ಬೆಂಗಳೂರಿನಲ್ಲಿ ಸರ ಗಳ್ಳತನದಲ್ಲಿ ಅವರದ್ದೇ ದೊಡ್ಡ ಕೈವಾಡ ಎಂದು ಆರೋಪಿಸಿದರು.
ಆಗ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಈವರೆಗೆ ಅಕ್ರಮ ಬಾಂಗ್ಲಾದೇಶೀಯರ ವಿರುದ್ಧ ಒಟ್ಟು 79 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 50 ಜನರನ್ನು ವಾಪಸ್ ಕಳಿಸಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.