
ಬೆಂಗಳೂರು : ಕನ್ನಡ ಚಿತ್ರರಂಗದ ರೆಬೆಲ್‌ಸ್ಟಾರ್ ಹಾಗೂ ರಾಜಕಾರಣಿ ಅಂಬರೀಶ್ ಅನಾರೋಗ್ಯ ಸಮಸ್ಯೆಯಿಂದಾಗಿ ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ನಟ, ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಡಾ.ಹರೀಶ್ ( 69) ಅವರು ವರ್ಷದ ಹಿಂದೆ ಇದೇ ದಿನದಂದು (2017 ರ ನ. 24) ನಿಧನರಾಗಿದ್ದರು.
1948ರಲ್ಲಿ ಜನಿಸಿದ್ದ ಡಾ.ಹರೀಶ್ 35 ವರ್ಷಗಳಿಂದ ದೊಡ್ಡರಸಿನಕೆರೆ ಸಮೀಪದ ಕೆ.ಎಂ.ದೊಡ್ಡಿಯಲ್ಲಿ ತಮ್ಮದೇ ಸ್ವಂತ ಕ್ಲಿನಿಕ್ ಹೊಂದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು 2017 ರ ನವೆಂಬರ್ 24 ರಂದು ಮೈಸೂರಿನ ನಿವಾಸದಲ್ಲಿ ಮೃತಪಟ್ಟಿದ್ದರು.
ಇದೀಗ ಸಹೋದರ ನಿಧನದಂದೇ ಅಂಬಿಯೂ ಕೂಡ ಇಹಲೋಕ ತ್ಯಜಿಸಿದ್ದಾರೆ. ಶನಿವಾರ ಸಂಜೆ ಅವರಿಗೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ತೀವ್ರ ಸಮಸ್ಯೆ ಕಾಣಿಸಿಕೊಂಡ ಕಾರಣ, ವಿಂಡ್ಸರ್ ಮ್ಯಾನರ್ ಬಳಿಯ ಫ್ಲ್ಯಾಟ್‌ನಲ್ಲಿ ನಿಂತಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ವಸಂತನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ಎದೆನೋವು, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತೀವ್ರ ಹೃದಯಾಘಾತದಿಂದ ಸುಮಾರು 10. 15ರ ವೇಳೆಗೆ ಮೃತಪಟ್ಟಿದ್ದಾರೆ. ಕಳೆದ 15 ವರ್ಷಗಳಿಂದ ಸಣ್ಣಮಟ್ಟದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು 2014ರಲ್ಲಿ ತೀವ್ರ ಅನಾರೋಗ್ಯ ಸಮಸ್ಯೆ ಎದುರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.