
ಧಾರವಾಡ: ಹುಬ್ಬಳ್ಳಿಯ ಎಪಿಎಂಸಿ ಆವರಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಆರಂಭಿಸುವ ಕುರಿತು ಈಗಾಗಲೇ ತೀರ್ಮಾನಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪ್ರಸ್ತಾವನೆ ಪಡೆದು ಆದಷ್ಟು ಶೀಘ್ರ ಇಲಾಖೆಯಿಂದ ಒಪ್ಪಿಗೆ ನೀಡುವುದಾಗಿ ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದ್ದಾರೆ.
‘ಬಡ ಮಕ್ಕಳಿಗೆ ಅಕ್ಷರ ಕಲಿಸಿದ್ದಕ್ಕೆ ನೋಟಿಸ್’ ಶೀರ್ಷಿಕೆ ಅಡಿ ಬುಧವಾರ ಕನ್ನಡಪ್ರಭದಲ್ಲಿ ವಿಶೇಷ ವರದಿ ಪ್ರಕಟವಾದ ಹಿನ್ನೆಲೆ ಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶಿಕ್ಷಕರ ಹಾಗೂ ಮಕ್ಕಳ ಆಸಕ್ತಿ ಮೇರೆಗೆ 8ನೇ ತರಗತಿ ಆರಂಭಿಸಲಾಗುವುದು. ಕೂಡಲೇ ಪ್ರಸ್ತಾವನೆ ಪಡೆದು ಸರ್ವ ಶಿಕ್ಷಣ ಅಭಿಯಾನದ ಅಡಿ ತರಗತಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇಲಾಖೆ ಪರವಾನಗಿ ಇಲ್ಲದೇ ವಸತಿ ನಿಲಯ ನಡೆಸಿದ್ದು ತಪ್ಪು. ಸ್ಥಳೀಯರು ಹಾಗೂ ಶಿಕ್ಷಕರು ಸಮಾಜಕ್ಕೆ ಅನುಕೂಲದ ಕೆಲಸ ಮಾಡಿದರೂ ಪರವಾನಗಿ ಪಡೆದಿಲ್ಲ. ಹೀಗಾಗಿ ಬಿಇಓ ಅವರು ಈ ಕುರಿತು ಸ್ಪಷ್ಟನೆ ಕೇಳಿದ್ದಾರೆ. ಉದ್ದೇಶಪೂರ್ವಕವಾಗಿ ಶಾಲೆಗೆ ನೋಟಿಸ್ ಜಾರಿ ಮಾಡಿಲ್ಲ. ಈ ಕುರಿತು ಮಂಗಳವಾರ ರಾತ್ರಿ ಶಾಲೆಗೆ ಭೇಟಿ ನೀಡಿ ಶಿಕ್ಷಕರ, ಸ್ಥಳೀಯರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ಇನ್ಮುಂದೆ ಶಾಲೆಯ ವಿಷಯದಲ್ಲಿ ಯಾವುದೇ ದೂರು ಬರದಂತೆ ನೋಡಿಕೊಳ್ಳುತ್ತೇನೆ ಎಂದು ನಾಗೂರ ತಿಳಿಸಿದರು.
‘ಕನ್ನಡಪ್ರಭ ವರ್ಷದ ವ್ಯಕ್ತಿ’ ರಾಮು ಮೂಲಗಿ ಅವರು ಶಿಕ್ಷಕರಾಗಿರುವ ಶಾಲೆ ಇದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.