
ಬೆಂಗಳೂರು: ರಾಜ್ಯದ 12000 ಕ್ಕೂ ಹೆಚ್ಚು ಶಾಲಾ ಶಿಕ್ಷಕರಿಗೆ 6 ತಿಂಗಳಿನಿಂದ ವೇತನ ಪಾವತಿಯಾಗದ ಸಮಸ್ಯೆಗೆ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಂದಿಸಿದ್ದಾರೆ.
‘ರಾಜ್ಯದ 12 ಸಾವಿರ ಶಿಕ್ಷಕರಿಗೆ 6 ತಿಂಗಳಿನಿಂದ ವೇತನ ಇಲ್ಲ’ ಎಂಬ ಶೀರ್ಷಿಕೆಯಡಿ ‘ಕನ್ನಡಪ್ರಭ’ ವರದಿ ಪ್ರಕಟಿಸಿರುವುದನ್ನು ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಭಾಷಣಕ್ಕೂ ಮುನ್ನ ವೇದಿಕೆಯಲ್ಲಿ ಕುಳಿತು ಓದಿ ತಿಳಿದುಕೊಂಡ ಮುಖ್ಯಮಂತ್ರಿ ಗಳು, ಸ್ಥಳದಲ್ಲಿಯೇ ಫೋನಾಯಿಸಿದರು.
ಹಣಕಾಸು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಈ ಯೋಜನೆಗೆ ಕೇಂದ್ರ ಅನುದಾನ ನೀಡಿಲ್ಲ ಎಂದು ಅಧಿಕಾರಿಗಳು ಹೇಳು ತ್ತಿದ್ದಾರೆ. ಆದರೂ, ಶಿಕ್ಷಕರಿಗೆ ಕೂಡಲೇ ವೇತನ ನೀಡುವಂತೆ ಹಣಕಾಸು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.